ಧಾರವಾಡ

ದಾಸೋಹ ಪ್ರಜ್ಞೆ ಮೂಡಲಿ

Published On :

ಹುಬ್ಬಳ್ಳಿ: ದಾಸೋಹ ಪ್ರಜ್ಞೆ ಪ್ರತಿಯೊಬ್ಬರಲ್ಲಿಯೂ ಮೂಡಿಸುವ ಮೂಲಕ ವೀರಶೈವ ಧರ್ಮದ ಮಹತ್ವದ ಕುರಿತಂತೆ ಜಾಗೃತಿ ಮೂಡಿಸಬೇಕಿದೆ ಎಂದು ಲೆಕ್ಕಪರಿಶೋಧಕ ನಟರಾಜ ಮೂರಶಿಳ್ಳಿನ ಹೇಳಿದರು.
ಬಸವೇಶ್ವರ ಜಯಂತ್ಯುತ್ಸವ ಅಂಗವಾಗಿ ಶುಕ್ರವಾರ ಮೂರುಸಾವಿರಮಠದ ಆವರಣದಲ್ಲಿ ನಡೆದ ಲಿಂಗಾಯತ ಧರ್ಮದ ಆಚರಣೆ ಕುರಿತಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜಗಜ್ಯೋತಿ ಬಸವೇಶ್ವರರ ಕಾಲದಿಂದಲೂ ದಾಸೋಹ ವ್ಯವಸ್ಥೆ ಬೆಳೆದುಕೊಂಡು ಬಂದಿದ್ದು, ಇದರ ಮಹತ್ವದ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸಬೇಕಿದೆ. ಸ್ವಾರ್ಥ ಮನೋಭಾವ ಬಿಟ್ಟು ಪ್ರತಿಯೊಬ್ಬರೂ ದಾನ, ಧರ್ಮ ಮಾಡಬೇಕು. ಇದರಿಂದ ಸಮಾಜ ಬಾಂಧವರ, ಸಮಾಜದ ಅಭಿವೃದ್ಧಿ ಸಾಧ್ಯ ಎಂದೂ ಮೂರಶಿಳ್ಳಿನ ಪ್ರತಿಪಾದಿಸಿದರು.
ಶರಣರ ತತ್ವ ಸಿದ್ಧಾಂತಗಳಿಗೆ ವೈಜ್ಞಾನಿಕ ಹಿನ್ನೆಲೆಯಿದೆ. ಅವುಗಳನ್ನು ಕೇವಲ ಅರ್ಥೈಯಿಸಿಕೊಳ್ಳುವುದಲ್ಲದೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು ಯುವಕರಲ್ಲಿ ಉತ್ತಮ ಸಂಸ್ಕಾರ ತುಂಬುವಂತಹ ಕೆಲಸ ಸಮಾಜದಲ್ಲಿ ಆಗಬೇಕು ಎಂದರು.
ಕೃಷಿ ಪ್ರಶಸ್ತಿ ಪುರಸ್ಕೃತ ರಾಜೇಶ್ವರಿ ಹಿರೇಮಠ, ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶದ ಮೋಹ ಹೆಚ್ಚುತ್ತಿದೆ. ದೇಶದ ಸಂಸ್ಕೃತಿಯಿರುವ ಗ್ರಾಮೀಣ ಪ್ರದೇಶದ ಜನರು ನಗರದತ್ತ ಮುಖ ಮಾಡುತ್ತಿದ್ದಾರೆ. ದೇಶ, ಸಂಸ್ಕೃತಿ, ಸಂಪ್ರದಾಯದ ದೃಷ್ಟಿಯಿಂದ ಹಳ್ಳಿಗಳು ಉಳಿಯಬೇಕಿದೆ ಎಂದರು.
ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಅನುಸೂಯಾ ಅರಕೇರಿ ಅಧ್ಯಕ್ಷತೆವಹಿಸಿದ್ದರು. ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣವರ, ಅಜ್ಜಪ್ಪ ಬೆಂಡಿಗೇರಿ, ಸುಮಾ ಹಿರೇಮಠ, ನಾಗರಾಜ ಗೌರಿ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.