ಧಾರವಾಡ

ಸುಬುಧೇಂದ್ರ ತೀರ್ಥರ ಪುರಪ್ರವೇಶ

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಮೇ 13
ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪ್ರಸ್ತುತ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀ ಪಾದಂಗಳವರು ಸೋಮವಾರ ಪುರ ಪ್ರವೇಶ ಮಾಡಿದರು.
ಶ್ರೀಮಠದ ಪೀಠಾಧೀಶರಾಗಿ ದೀಕ್ಷೆ ಪಡೆದ ನಂತರ ಇದೇ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಶ್ರೀಗಳಿಗೆ ನೂರಾರು ಭಕ್ತರು ಭವ್ಯ ಸ್ವಾಗತ ಕೋರಿದರು. ದೇಶಪಾಂಡೆ ನಗರ ಗುಜರಾತ ಭವನದಿಂದ ಭವಾನಿ ನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠದವರೆಗೆ ಸಕಲ ವಾದ್ಯ ಮೇಳಗಳೊಂದಿಗೆ ಭವ್ಯ ಶೋಭಾಯಾತ್ರೆಯಲ್ಲಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರನ್ನು ಕರೆತರಲಾಯಿತು.
ಇದೇ ಸಂದರ್ಭದಲ್ಲಿ ಶ್ರೀಗಳ ತುಲಾಭಾರ ಹಾಗೂ ಗುರುವಂದನೆ ನಡೆಯಿತು. ನಂತರ ಶ್ರೀಗಳು ಆಶೀರ್ವಚನ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.