23ರಿಂದ ಲೋಕಾಯುಕ್ತರ ಪ್ರವಾಸ
ಕನ್ನಡಪ್ರಭ ವಾರ್ತೆ, ಧಾರವಾಡ, ಮೇ 20
ಧಾರವಾಡ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಿಲ್ಲೆಯಲ್ಲಿ ಮೇ 23, 24 ಹಾಗೂ 26ರಂದು ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಮೇ 23ರಂದು ಇಲ್ಲಿಯ ಹಳೇ ಸರ್ಕ್ಯೂಟ್ ಹೌಸ್ನಲ್ಲಿ, ಮತ್ತು ಕಲಘಟಗಿ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ, ಮೇ 24ರಂದು ಹುಬ್ಬಳ್ಳಿ ಸರ್ಕ್ಯೂಟ್ ಹೌಸ್ನಲ್ಲಿ ಹಾಗೂ ಕುಂದಗೋಳ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ, ನವಲಗುಂದ ಪ್ರವಾಸಿ ಮಂದಿರದಲ್ಲಿ ಮೇ 26 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಜಿಲ್ಲೆಯ ಸರ್ಕಾರಿ ಕಾರ್ಯಾಲಯದಲ್ಲಿ ಸಾರ್ವಜನಿಕರಿಗೆ ಕೆಲಸ ಮಾಡಿ ಕೊಡಲು ಅನಾವಶ್ಯಕ ವಿಳಂಬ, ಲಂಚದ ಹಣ ಬೇಡಿಕೆ, ಭ್ರಷ್ಟಾಚಾರ, ಹಣದ ದುರುಪಯೋಗ ಮೊದಲಾದ ತೊಂದರೆಗಳು ಇದ್ದಲ್ಲಿ ನ್ಯಾಯಾಲಯದ ವಿಚಾರಣೆ ಬಾಕಿ ಪ್ರಕರಣ ಹೊರತುಪಡಿಸಿ, ತಮ್ಮ ದೂರುಗಳನ್ನು ಪತ್ರ 1 ಮತ್ತು 2 ರಲ್ಲಿ ಅಫಿಡವಿಟ್ನೊಂದಿಗೆ ಸಲ್ಲಿಸಬಹುದೆಂದು ಲೋಕಾಯುಕ್ತ ಅಧೀಕ್ಷಕ ಕೆ. ಪರಶುರಾಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

