ಶ್ಯಾಮ ಮಲ್ಲನಗೌಡರ ಕಣಕ್ಕೆ
ಧಾರವಾಡ: ಜೂನ್ ತಿಂಗಳಲ್ಲಿ ನಡೆಯಲಿರುವ ಪಶ್ಚಿಮ ಪದವೀಧರ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಪ್ರೌಢಶಾಲೆ ಶಿಕ್ಷಕ ಶ್ಯಾಮ ಮಲ್ಲನಗೌಡರ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳ ಟಿಕೆಟ್ ಲಾಬಿ ಬೇಡವೆಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಕಳೆದ 11 ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿದ್ದು, ಶಿಕ್ಷಕರ ನೇಮಕಾತಿಗಾಗಿ ಸಾಕಷ್ಟು ಹೋರಾಟ ಮಾಡಿದ್ದೇನೆ. ಪ್ರಸ್ತುತ ಸೆಂಟ್ ಜೋಸೆಫ್ ಶಾಲೆಯಲ್ಲಿ ಶಿಕ್ಷಕ ವೃತ್ತಿಯಲ್ಲಿದ್ದು, ಶಿಕ್ಷಕ ಸ್ನೇಹಿತರ ಹಾಗೂ ನಿರುದ್ಯೋಗಿ ಪದವೀಧರ ಗೆಳೆಯರ ಒತ್ತಡಕ್ಕೆ ಮಣಿದು ಚುನಾವಣೆ ಎದುರಿಸುತ್ತಿದ್ದೇನೆ. ಪ್ರಸ್ತುತ ಹಣ, ಹೆಂಡ, ಜಾತಿ ಮುಂತಾದ ಸಂಗತಿಗಳನ್ನು ಬಳಸಿ ಗೆಲ್ಲುವ ತಂತ್ರ ಹೂಡಲಾಗುತ್ತಿದೆ. ಒಳ್ಳೆಯ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಕಡಿಮೆ. ಆದರೂ ಪ್ರಾಮಾಣಿಕವಾಗಿ ನನ್ನ ಹೋರಾಟ ಮತ್ತು ಸಾಮರ್ಥ್ಯವನ್ನು ಅವಲಂಬಿಸಿ ಚುನಾವಣೆ ಎದುರಿಸುತ್ತಿದ್ದೇನೆಂದರು.
ಸುದ್ದಿಗೋಷ್ಠಿಯಲ್ಲಿ ಪ್ರಕಾಶ ಮಲ್ಲಿಗವಾಡ, ಸುರೇಶ ಕುನ್ನೂರ, ಬಸವರಾಜ ಕೌಳಿಕಾಯಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

