ಪ್ರಮಾಣ ವಚನ ವೀಕ್ಷಣೆ
ಧಾರವಾಡ: ದೇಶದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮೇ 26 ರಂದು ದೆಹಲಿಯಲ್ಲಿ ನಡೆಯಲಿದ್ದು, ಇದರ ಪ್ರಯುಕ್ತ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸುಭಾಸ ರಸ್ತೆಯಲ್ಲಿರುವ ಪಕ್ಷದ ಕಚೇರಿಯ ಎದುರು ಸಂಜೆ 4 ರಿಂದ 7 ರ ವರೆಗೆ ಎಲ್ಸಿಡಿ ಸ್ಕ್ರೀನ್ ಮೂಲಕ ನೇರ ಪ್ರಸಾರದ ಪ್ರದರ್ಶನದ ವ್ಯವಸ್ಥೆ ಮಾಡಿದ್ದಾರೆ. ಪ್ರಮಾಣ ವಚನ ಸ್ವೀಕಾರ ಮಾಡಿದ ನಂತರ ಪಟಾಕ್ಷಿ ಸಿಡಿಸಿ, ಸಿಹಿ ಹಂಚುವುದು ಹಾಗೂ ಟೀ ವಿತರಿಸಿ, ವಿಜಯೋತ್ಸವ ಆಚರಿಸಲಾಗುತ್ತದೆ. ಪಕ್ಷದ ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಳ್ಳಬೇಕೆಂದು ಹು-ಧಾ ಪಶ್ಚಿಮ ಕ್ಷೇತ್ರದ ಕಾರ್ಯದರ್ಶಿ ಮೋಹನ ರಾಮದುರ್ಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಬಿರ ಸಮಾರೋಪ ಇಂದು
ಧಾರವಾಡ: ಇಲ್ಲಿಯ ಜಿಲ್ಲಾ ಬಾಲಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಹಾಗೂ ಬಾಲನಂದನ ಟ್ರಸ್ಟ್ ಸಹಯೋಗದಲ್ಲಿ ನಡೆದ 10 ದಿನಗಳ ಬೇಸಿಗೆ ಶಿಬಿರದ ಸಮಾರೋಪ ಮೇ 26ಕ್ಕೆ ರಂಗಾಯಣಯದ ಸಾಂಸ್ಕೃತಿಕ ಸಮುಚ್ಚಯದಲ್ಲಿ ನಡೆಯಲಿದೆ. ಮಕ್ಕಳ ಸಾಹಿತಿ ಎ.ಕೆ. ರಾಮೇಶ್ವರ, ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರಿ ಉಪನಿರ್ದೇಶಕ ವಿ.ಎ. ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ. ಹುಡೇದಮನಿ, ಬಾಲನಂದನ ಟ್ರಸ್ಟ್ ಅಧ್ಯಕ್ಷೆ ಪ್ರೀತಿ ಎನ್.ಕೆ. ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪಿ.ವೈ. ಶೆಟ್ಟಪ್ಪನವರ ವಹಿಸುವರು. ಸಮಾರಂಭದಲ್ಲಿ ಮಕ್ಕಳ ಕ್ಷೇತ್ರದಲ್ಲಿ ದುಡಿಯುವ ಸಾಮಾಜಿಕ ಕಾರ್ಯಕರ್ತರು, ಚಿಂತಕರು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳಬೇಕು ಎಂದು ಶಿಬಿರದ ನಿರ್ದೇಶಕ ಸಂತೋಷ ಮಹಾಲೆ ತಿಳಿಸಿದ್ದಾರೆ.
ನಮ್ರತಾಗೆ ಡಾಕ್ಟರೇಟ್
ಧಾರವಾಡ: ಇಲ್ಲಿಯ ಕೃಷಿ ವಿವಿಯ 27ನೇ ಘಟಿಕೋತ್ಸವದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ವಿಶೇಷಾಧಿಕಾರಿ ನಮ್ರತಾ ಎಂ. ಅವರಿಗೆ ಪಿಎಚ್ಡಿ ಪದವಿ ಪ್ರದಾನ ಮಾಡಲಾಯಿತು. ನ್ಯಾಚುರಲಿ ಕಲರ್ಡ್ ಕಾಟನ್ ಡಿಸೈನರ್ಸ್ ಅಪೀಯರಲ್ಯ್ನ್ ಎಮರ್ಜಿಂಗ್ ಟ್ರೆಂಡ್ ಇನ್ ಖಾದಿ ವಲ್ಡ್ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಇವರಿಗೆ ಪಿಎಚ್ಡಿ ಪ್ರದಾನ ಮಾಡಲಾಗಿದೆ. ಗೃಹ ವಿಜ್ಞಾನ ಕಾಲೇಜಿನ ವಸ್ತ್ರ ಮತ್ತು ಉಡುಪು ವಿನ್ಯಾಸ ವಿಭಾಗದ ಡಾ. ಶೈಲಜಾ ನಾಯಕ್ ಇವರಿಗೆ ಮಾರ್ಗದರ್ಶಕರಾಗಿದ್ದರು. ಇವರಿಗೆ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ. ದೇವಾನಂದ ಗಾಂವಕರ್, ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಬಸವರಾಜಗೆ ಪಿಎಚ್ಡಿ
ನವಲಗುಂದ: ಇಲ್ಲಿಯ ಬಸವರಾಜ ಶರಣಬಸಪ್ಪ ಲಕ್ಕುಂಡಿ ಅವರು 'ಅಬೆಲ್ಮಾಸ್ಕಸ್ ಎಸ್ಕೂಲೆಂಟಮ್' ಎಂಬ ಮಹಾ ಪ್ರಬಂಧ ಮಂಡಿಸಿ, ಬೀಜ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಪಿಎಚ್ಡಿ ಪದವಿಯಲ್ಲಿ ಹೆಚ್ಚಿನ ಗುಣಾಂಕಗಳೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದರಿಂದ ಕೃಷಿ ವಿವಿ ಚಿನ್ನದ ಪದಕದೊಂದಿಗೆ ಪಿಎಚ್ಡಿ ಪ್ರದಾನ ಮಾಡಿದೆ. ಕೃಷಿ ವಿವಿಯ ಬೀಜ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಡಾ. ಎ.ಎಸ್. ಚನ್ನವೀರಸ್ವಾಮಿ ಮಾರ್ಗದರ್ಶಕರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

