ಗದಗ

ಇಂದು ಉಪನ್ಯಾಸ

Published On :

ಗದಗ: ತಾಲೂಕು ಸಾಹಿತ್ಯ ಪರಿಷತ್ ವತಿಯಿಂದ ದಿ. ನಾರಾಯಣಭಟ್ ಶಿವಪೂರ ಸ್ಮರಣಾರ್ಥ ಸ್ಥಳೀಯ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಫೆ. 7ರಂದು ಬೆಳಗ್ಗೆ 11 ಗಂಟೆಗೆ ರನ್ನನ ಗಧಾಯುದ್ಧದ ನೀರೋಳಗಿರ್ದುಂ ಬೆಮರ್ತನುರಗ ಪತಾಕಂ ವಿಷಯದಲ್ಲಿ ವಿದ್ಯಾದಾನ ಸಮಿತಿಯ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾ. ಎಂ.ಸಿ. ಕಟ್ಟಿಮನಿ ಉಪನ್ಯಾಸ ನೀಡಲಿದ್ದಾರೆ. ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸ್ಥಾನಿಕ ಸಮಿತಿಯ ಅಧ್ಯಕ್ಷರಾದ ಆರ್.ಕೆ. ಹಬೀಬ ಹಾಗೂ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಯು.ಬಿ. ಬಾರಕೇರ, ಡಾ. ಅನಂತ ಶಿವಪೂರ ಹಾಗೂ ಸಹೋದರರು ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಗದಗ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಕಿಶೋರಬಾಬು ನಾಗರಕಟ್ಟಿ ವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು ಗದಗ ತಾಲೂಕು ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರು ಆಗಮಿಸಬೇಕೆಂದು ಪರಿಷತ್ತಿನ ಗೌರವ ಕಾರ್ಯದರ್ಶಿ ಶಶಿಕಾಂತ ಕೊರ್ಲಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ಉಚಿತ ತಪಾಸಣೆ
ಗದಗ: ಸ್ಥಳೀಯ ಸ್ವಾಮಿ ವಿವೇಕಾನಂದ ರಸ್ತೆಯ ಮಸಾರಿಯಲ್ಲಿರುವ ವಾತ್ಸಲ್ಯ ಆಸ್ಪತ್ರೆಯಲ್ಲಿ ಸುಟ್ಟಗಾಯದಿಂದ ಸಮಸ್ಯೆ ಎದುರಿಸುತ್ತಿರುವವರಿಗೆ ಶಸ್ತ್ರಚಿಕಿತ್ಸಾ ಪೂರ್ವ ಉಚಿತ ತಪಾಸಣಾ ಪರೀಕ್ಷೆಯು ಫೆ. 8ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ.ಸುಟ್ಟಗಾಯದಿಂದ ದೇಹದ ಭಾಗಗಳು ಒಂದಕ್ಕೊಂದು ಅಂಟಿಕೊಂಡಿರುವುದು, ಕುತ್ತಿಗೆ ಭುಜಕ್ಕೆ ಹೊಂದಿಕೊಂಡಿರುವುದು ಹಾಗೂ ಇತರ ಸಂಬಂಧಿತ ತೊಂದರೆಗಳಿಂದ ಬಳಲುತ್ತಿರುವವರಿಗೆ ಶಸ್ತ್ರಚಿಕಿತ್ಸೆ ಪೂರ್ವದಲ್ಲಿ ಪರೀಕ್ಷೆ ಮಾಡಲಾಗುವುದು. ಶಸ್ತ್ರ ಚಿಕಿತ್ಸಕ ಡಾ. ದಾನೇಶ ದೇಸಾಯಿ ಸಲಹೆ ನೀಡಲಿದ್ದಾರೆ. ಅರ್ಹರಿಗೆ ಶಸ್ತ್ರಚಿಕಿತ್ಸೆಯನ್ನು ಫೆ. 25 ರಿಂದ ಮಾ. 1 ರವರೆಗೆ ನಡೆಸಲಾಗುವುದು. ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗೆ ವಾತ್ಸಲ್ಯ ಆಸ್ಪತ್ರೆ ವಿವೇಕಾನಂದ ರಸ್ತೆ, 4ನೇ ಕ್ರಾಸ್, ಮಸಾರಿ ಗದಗ-01 ದೂ. 08372 252399 ಇಲ್ಲಿಗೆ ಸಂಪರ್ಕಿಸುವಂತೆ ಸಾರ್ವಜನಿಕ ಸಂಪರ್ಕಾಧಿಕಾರಿ ಧೀರೇಂದ್ರ ಪಂಢರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.