ಗದಗ

ಸಮರ್ಪಕ ನೀರು ಪೂರೈಕೆಗೆ ಆಗ್ರಹ

Published On :

ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಫೆ. 6
ಪಟ್ಟಣಕ್ಕೆ ಕಳೆದ ಹಲವು ದಿನಗಳಿಂದ ತುಂಗಭದ್ರಾ ನದಿಯಿಂದ ಕುಡಿಯುವ ನೀರು ದೊರೆಯದೇ ನಾಗರಿಕರು ಪರದಾಡುತ್ತಿದ್ದು, ಜಿಲ್ಲಾಧಿಕಾರಿಯವರು ಶೀಘ್ರವೇ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸಲು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಶಿರಹಟ್ಟಿ ತಾಲೂಕು ಜಾತ್ಯತೀತ ಜನತಾದಳ ವತಿಯಿಂದ ಈಚೆಗೆ ಗದಗನಲ್ಲಿ ಅಪರ ಜಿಲ್ಲಾಧಿಕಾರಿ ಶ್ರೀಧರ ಕೋರೆಯವರಿಗೆ ಮನವಿ ಸಲ್ಲಿಸಿದರು.
ತುಂಗಭದ್ರಾ ನದಿಗೆ ಜಲಾಶಯದಿಂದ ಕಳೆದ ಕೆಲ ದಿನಗಳ ಹಿಂದೆ 2 ಟಿಎಂಸಿ ನೀರನ್ನು ಬಿಡುಗಡೆ ಮಾಡಿದ್ದಾಗಿ ಮೈಸೂರ ಡಿವಿಜನಲ್ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆ ನೀರು ಲಕ್ಷ್ಮೇಶ್ವರಕ್ಕೆ ಕುಡಿವ ನೀರನ್ನು ಪೂರೈಸುವ ಮೇವುಂಡಿ ಜಾಕ್‌ವೆಲ್ ತಲುಪಿಲ್ಲ. ಹೀಗಾಗಿ ಸುಮಾರು 15 ದಿನಗಳಿಂದ ಸಾರ್ವಜನಿಕರು ಕುಡಿಯುವ ನೀರಿಗೆ ತೊಂದರೆ ಅನುಭವಿಸುವಂತಾಗಿದೆ. ಮೈಸೂರು ಡಿವಿಜನಲ್ ಕಮಿಷನರ್ ಅವರಿಗೆ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ತುಂಗಭದ್ರಾ ನದಿಗೆ ಬಿಡುವಂತೆ ಮನವಿ ಮಾಡಿಕೊಂಡು, ಲಕ್ಷ್ಮೇಶ್ವರ ಹಾಗೂ ಸುತ್ತ ಮುತ್ತಲಿನ ಅನೇಕ ಹಳ್ಳಿಗಳ ಕುಡಿವ ನೀರಿನ ಸಮಸ್ಯೆ ನಿವಾರಿಸಬೇಕು. ಅಲ್ಲದೇ ಮೇವುಂಡಿ ಜಾಕ್‌ವೆಲ್‌ಗೆ ಪೂರೈಕೆಯಾಗುತ್ತಿರುವ ವಿದ್ಯುತ್ ನಿರಂತರವಾಗಿ ಸರಬರಾಜು ಆಗದೇ ಇರುವುದರಿಂದ ಪಟ್ಟಣಕ್ಕೆ ಸರಿಯಾಗಿ ನೀರನ್ನು ಪೂರೈಸಲು ಆಗುತ್ತಿಲ್ಲ. ಅದಕ್ಕಾಗಿ ಜಿಲ್ಲಾಧಿಕಾರಿಯವರು ಜನರೇಟರ್‌ನ್ನು ಅಳವಡಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ. ಮನವಿ ನೀಡುವ ಸಂದರ್ಭದಲ್ಲಿ ಪುರಸಭೆ ಸದಸ್ಯ ತಿಪ್ಪಣ್ಣ ಸಂಶಿ, ಬಸವಣ್ಣೆಪ್ಪ ಹಂಜಗಿ, ಪದ್ಮರಾಜ ಪಾಟೀಲ್, ರಾಮನಗೌಡ ಪಾಟೀಲ್, ಶಿವಣ್ಣ ಆಲೂರ, ಅನುರಾಜ ಹಂಜಗಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.