ಗದಗ

11ರಂದು ಕುರುಬ ಸಮಾಜ ಸಭೆ

Published On :

ನರಗುಂದ: ಬಹು ದಿನಗಳಿಂದ ತಾಲೂಕಿನಲ್ಲಿ ಕುರಬ ಸಮಾಜ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದಿದ್ದು, ಸಮಾಜದ ಅಭಿವೃದ್ಧಿಗೆ ಚಿಂತನೆ ಅವಶ್ಯ ಎಂದು ಸಮಾಜದ ಮುಖಂಡ ಎಂ.ಎಂ. ಮುಳ್ಳೂರ ಹೇಳಿದರು. ಅವರು ಬುಧವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ತಾಲೂಕಿನಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿದ ಕುರಬ ಸಮುದಾಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿದೆ. ಈ ಬಗ್ಗೆ ಇದೇ ತಿಂಗಳ 11ರಂದು ದಂಡಿನ ಮೆಮೋರಿಯಲ್ ಆವರಣದಲ್ಲಿ ಸಭೆ ಕರೆಯಲಾಗಿದ್ದು, ಸಮಾಜದ ಅಭಿವೃದ್ಧಿಗೆ ಮತ್ತು ಕನಕ ಜಯಂತಿ ಕುರಿತು ಚರ್ಚಿಸಲಾಗುವುದು. ಕಾರಣ ಈ ಪೂರ್ವಭಾವಿ ಸಭೆಗೆ ಸಮಾಜ ಬಾಂಧವರು, ಯುವಕರು, ಆಗಮಿಸಿ ಸಲಹೆ ಸೂಚನೆ ನೀಡಬೇಕೆಂದರು. ಈ ಸಂದರ್ಭದಲ್ಲಿ ಸಿ.ವೈ. ದಂಡಿನ, ಅಖಂಡಪ್ಪ ಮುರಾರಿ, ಬಾಬು ಹಿರೇಹೊಳಿ, ಬಸವರಾಜ ನರಗುಂದ, ದ್ಯಾಮಣ್ಣ ಸವದತ್ತಿ, ನೀಲಪ್ಪ ಗುಡದನ್ನವರ, ಅರ್ಜುನ ಈಟಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.