ಮುಖ್ಯಮಂತ್ರಿಗೆ ಅಭಿನಂದನೆ: ಲಮಾಣಿ
ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಫೆ. 9
ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಲಕ್ಷ್ಮೇಶ್ವರ ತಾಲೂಕನ್ನಾಗಿಸಲು ಮಹತ್ತರ ಪಾತ್ರ ವಹಿಸಿದ್ದಾರೆ. ಅವರಿಗೆ ಲಕ್ಷ್ಮೇಶ್ವರ ತಾಲೂಕಿನ ಸಮಸ್ತ ಜನತೆಯ ಪರವಾಗಿ ಧನ್ಯವಾದ ಅರ್ಪಿಸುತ್ತೇನೆಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
ಲಕ್ಷ್ಮೇಶ್ವರವನ್ನು ತಾಲೂಕನ್ನಾಗಿ ಮಾಡಿದ ಹಿನ್ನೆಲೆಯಲ್ಲಿ ಶನಿವಾರ ಪಟ್ಟಣದ ಪುರಸಭೆಯ ಆವರಣದಲ್ಲಿ ರಾಜ್ಯ ಸರ್ಕಾರಕ್ಕೆ ಹಾಗೂ ಸಿಎಂ ಜಗದೀಶ ಶೆಟ್ಟರ್, ಗದಗ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಅವರಿಗೆ ಅಭಿನಂದನೆ ಸಲ್ಲಿಸಲು ಏರ್ಪಡಿಸಿದ್ದ ಸಮಾರಂಭದಲ್ಲಿ ಮಾತನಾಡಿದರು.
ಗದಗ ಜಿಲ್ಲೆಯಲ್ಲಿ ಲಕ್ಷ್ಮೇಶ್ವರ ಹಾಗೂ ಗಜೇಂದ್ರಗಡವನ್ನು ತಾಲೂಕಾಗಿ ಘೋಷಣೆ ಮಾಡಿದ ಸರ್ಕಾರದ ಕಾರ್ಯ ಸ್ವಾಗತಾರ್ಹ. ಲಕ್ಷ್ಮೇಶ್ವರವು ತಾಲೂಕಾಗಲು ಎಲ್ಲ ಅರ್ಹತೆ ಹೊಂದಿದ್ದು, ತಾಲೂಕಾಗಲು ಶ್ರಮಿಸಿದ ಹಲವಾರು ಮಹನೀಯರಿಗೆ ಅಭಿನಂದನೆ ತಿಳಿಸಿದರು.
ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್ ಮಾತನಾಡಿ, ಲಕ್ಷ್ಮೇಶ್ವರ ಜನತೆಯ ಕನಸು ನನಸು ಮಾಡಿದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಸಚಿವ ಕಳಕಪ್ಪ ಬಂಡಿಯವರ ಕಾರ್ಯ ಶ್ಲಾಘನೀಯ. ಹಲವು ಮಹನೀಯರ ಹೋರಾಟದ ಫಲವಾಗಿ ಲಕ್ಷ್ಮೇಶ್ವರವು ತಾಲೂಕಾಗಿದೆ ಎಂದರು.
ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಎಸ್.ಎನ್. ಪಾಟೀಲ, ಜಿಪಂ ಸದಸ್ಯ ಎಂ.ಎಸ್. ದೊಡ್ಡಗೌಡರ, ತಾಪಂ ಸದಸ್ಯ ಚೆನ್ನಪ್ಪ ಜಗಲಿ. ಎಲ್.ಸಿ. ಲಿಂಬಯ್ಯಸ್ವಾಮಿಮಠ, ಓಂಪ್ರಕಾಶ ಜೈನ್, ಪ್ರೊ. ಎಸ್.ಎನ್. ಪಾಟೀಲ, ಸೋಮಣ್ಣ ಡಾಣಗಲ್ಲ, ಸೋಮಣ್ಣ ಮುಳಗುಂದ, ಪುರಸಭೆ ಮಾಜಿ ಅಧ್ಯಕ್ಷ ಎನ್.ಜಿ. ಹೊಂಬಳ, ಸಣ್ಣೀರಪ್ಪ ಹಳ್ಳೆಪ್ಪನವರ ಮುಂತಾದವರು ಕಾರ್ಯಕ್ರಮದಲ್ಲಿ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಜಯಕ್ಕ ಕಳ್ಳಿ, ಕುಬೇರಪ್ಪ ಮಹಾಂತಶೆಟ್ಟರ್, ಗದಿಗೆಪ್ಪ ಯತ್ತಿನಹಳ್ಳಿ, ಎಸ್.ಪಿ. ಪಾಟೀಲ್, ನಿಂಗಪ್ಪ ಬನ್ನಿ, ವಿ.ಜಿ. ಪಡಗೇರಿ. ಪೂರ್ಣಾಜಿ ಖರಾಟೆ, ಕಿರಣ ಸಾಂಬ್ರಾಣಿ, ಶಿಗ್ಲಿ ಗ್ರಾಪಂ ಮಾಜಿ ಅಧ್ಯಕ್ಷ ರಾಮಣ್ಣ ಲಮಾಣಿ, ಬಸವರಾಜ ಉಪನಾಳ ಮುಂತಾದವರು ಹಾಜರಿದ್ದರು. ಬಸವರಾಜ ಬಾಳೇಶ್ವರಮಠ ನಿರೂಪಿಸಿದರು. ಮಹೇಶ ಹೊಗೆಸೊಪ್ಪಿನ ಸ್ವಾಗತಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

