ಲಕ್ಷ್ಮೇಶ್ವರ: ಮುಗಿಲು ಮುಟ್ಟಿದ ಸಂಭ್ರಮ
ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣವನ್ನು ತಾಲೂಕಾಗಿ ಘೋಷಣೆ ಮಾಡಿದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಗೆ ಪಟ್ಟಣ ಜನತೆ ಹಾಗೂ ಸುತ್ತ ಮುತ್ತಲಿನ ಗ್ರಾಮಗಳ ಪರವಾಗಿ ಲಕ್ಷ್ಮೇಶ್ವರ ತಾಲೂಕು ಹೋರಾಟ ಸಮಿತಿಯು ಶುಕ್ರವಾರ ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ಸಭೆ ಸೇರಿ ಅಭಿನಂದನೆ ಸಲ್ಲಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡರ, ಹಲವು ವರ್ಷಗಳಿಂದಲೂ ತಾಲೂಕಿಗಾಗಿ ಮಾಡಿದ ಹೋರಾಟಕ್ಕೆ ಇಂದು ಪ್ರತಿಫಲ ದೊರೆತಿದ್ದು, ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಸಚಿವ ಕಳಕಪ್ಪ ಬಂಡಿಯವರಿಗೆ ಅಭಿನಂದನೆ. ಲಕ್ಷ್ಮೇಶ್ವರ ತಾಲೂಕಾಗಲು ಎಲ್ಲ ಅರ್ಹತೆ ಹೊಂದಿದ್ದರೂ ಯಾವುದೋ ಕಾರಣಗಳಿಂದ ತಾಲೂಕು ಕೇಂದ್ರವಾಗಲು ಹಿನ್ನಡೆ ಉಂಟಾಗಿತ್ತು. ಸುಮಾರು 40 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ತಾಲೂಕು ರಚನೆಗಾಗಿ ಹೋರಾಟ ಮಾಡಿದ ಅನೇಕ ಹಿರಿಯರನ್ನು ಮಾಜಿ ಶಾಸಕರನ್ನು ಸ್ಮರಿಸಿದರು. ಪುರಸಭೆಯ ಮಾಜಿ ಅಧ್ಯಕ್ಷ ಎನ್.ಜಿ. ಹೊಂಬಳ ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ಜಿ.ಎಸ್. ಗಡ್ಡದೇವರಮಠ, ಪುರಸಭೆಯ ಅಧ್ಯಕ್ಷೆ ಜಯಕ್ಕ ಕಳ್ಳಿ, ಸಣ್ಣೀರಪ್ಪ ಹಳ್ಳೆಪ್ಪನವರ, ಕುಬೇರಪ್ಪ ಮಹಾಂತಶೆಟ್ಟರ, ಚೆಂಬಣ್ಣ ಬಾಳಿಕಾಯಿ, ಸೋಮಣ್ಣ ಮುಳಗುಂದ, ಚೆನ್ನಪ್ಪ ಜಗಲಿ, ವಿ.ಜಿ. ಪಡಗೇರಿ. ಎಂ.ಎಂ. ಅಗಡಿ, ಮಹೇಶ ಹೊಗೆಸೊಪ್ಪಿನ, ಸೋಮನಗೌಡ ಪಾಟೀಲ, ಜಗದೀಶ ಪುರಾಣಿಕಮಠ, ನಿಂಗಪ್ಪ ಬನ್ನಿ, ಎಲ್.ಸಿ. ಲಿಂಬಯ್ಯಸ್ವಾಮಿಮಠ, ಬಸವರಾಜ ಬಾಳೇಶ್ವರಮಠ. ಚಂದ್ರು ಹಂಪಣ್ಣವರ. ಶರಣು ಗೋಡಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

