ರಾಯಣ್ಣ ವಸತಿ ಶಾಲೆಗೆ ಅರ್ಜಿ ಆಹ್ವಾನ
ಗದಗ: ಸಂಗೊಳ್ಳಿ ರಾಯಣ್ಣ ಸ್ಮಾರಕ ವಸತಿ ಶಾಲೆಗೆ ಅರ್ಹ ವಿದ್ಯಾರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದ್ದು, 2013-14ನೇ ಸಾಲಿಗೆ 8ನೇ ತರಗತಿ ಇಂಗ್ಲಿಷ್ ಮಾಧ್ಯಮದ ವಿಭಾಗಕ್ಕೆ ಪ್ರವೇಶ ಪರೀಕ್ಷೆಯನ್ನು ನಡೆಸಿ ವಿದ್ಯಾರ್ಥಿ ಗಳನ್ನು ಆಯ್ಕೆ ಮಾಡಬೇಕಾಗಿದ್ದು, ಈ ಸಂಬಂಧ ಬೆಳಗಾವಿ ವಿಭಾಗದ ಧಾರವಾಡ, ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಗದಗ, ಹಾವೇರಿ, ಕಾರವಾರ ಜಿಲ್ಲೆಯಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2012-13ನೇ ಸಾಲಿನಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅರ್ಹ ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 50 ಸೀಟುಗಳು ಲಭ್ಯವಿದ್ದು, ಶೇ 50 ಸಾಮ್ಯಾನ, ಶೇ 25 ವರ್ಗ ಅಲ್ಪಸಂಖ್ಯಾತರಿಗೆ, ಶೇ 25 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರರಿಗೆ ಮೀಸಲಿದ್ದು, ಈ ಮೇಲಿನ ಎಲ್ಲ ವರ್ಗದಲ್ಲಿ ಶೇ. 50ರಷ್ಟು ಬಾಲಕಿಯರಿಗೆ ಮೀಸಲಿಡಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ ವಸತಿ ಹಾಗೂ ಶಿಕ್ಷಣ ನೀಡಲಾಗುವುದು ಅರ್ಜಿಗಳನ್ನು ಹಾಗೂ ವಿವರಗಳಿಗೆ ಸಂಬಂಧಿಸಿದ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಿಂದ ಹಾಗೂ ಸಂಗೊಳ್ಳಿ ರಾಯಣ್ಣ ವಸತಿ ಶಾಲೆ ನಂದಗಡ ಇವರಿಂದ ಪಡೆಯಬಹುದು. ಅರ್ಜಿ ಸಲ್ಲಿಸಲು ಮಾರ್ಚ್ 9 ಕೊನೆಯ ದಿನವಾಗಿದೆ. ನೇರವಾಗಿ ಸಂಗೊಳ್ಳಿ ರಾಯಣ್ಣ ಸ್ಮಾರಕ ಶಾಲೆ ನಂದಗಡ ತಾ, ಖಾನಾಪುರ ಜಿ. ಬೆಳಗಾವಿ ಇಲ್ಲಿಗೆ ಸಲ್ಲಿಸಬಹುದು ಎಂದು ಪ್ರಕಟಣೆತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

