ಗದಗ

ಅಪಘಾತದಿಂದ ಬಯಲಾದ ಕಳ್ಳ ಸಾಗಾಣಿಕೆ

Published On :

ಲಕ್ಷ್ಮೇಶ್ವರ: ಕಳೆದ ಶನಿವಾರ ಟೆಂಪೊ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಈ ಅಪಘಾತದಲ್ಲಿ ಪಟ್ಟಣದ ಮಲ್ಲಪ್ಪ ಗದ್ದಿ ಎಂಬ ವ್ಯಕ್ತಿ ಗಾಯಗೊಂಡಿದ್ದು ಅವನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಆದರೆ, ಈ ಘಟನೆಯಲ್ಲಿ ಅಕ್ರಮ ಕಾರ್ಯವೊಂದು ಹೊರಬಿದ್ದಿದ್ದು, ಅಕ್ರಮ ಸಾಗವಾನಿ ನಾಟಾಗಳ ಕಳ್ಳ ಸಾಗಾಣಿಕೆ ಮಾಡುತ್ತಿರುವ ದಂಧೆ ಬೆಳಕಿಗೆ ಬಂದಿದೆ. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟೆಂಪೋದಲ್ಲಿ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಸಾಗುವಾನಿ ನಾಟಾಗಳು ಜಿಲ್ಲೆಯ ಪ್ರಭಾವಿ ರಾಜಕಾರಣಿಗಳಿಗೆ ಸೇರಿದ್ದು ಎಂಬ ಮಾತು ಎಲ್ಲೆಡೆ ಹರಿದಾಡುತ್ತಿದೆ. ಈ ಹಿಂದೆ ಕೂಡಾ ಸಾಕಷ್ಟು ಬಾರಿ ಅಕ್ರಮ ಸಾಗವಾನಿ ಕಟ್ಟಿಗೆಯನ್ನು ಸಾಗಿಸುವ ಪ್ರಕರಣ ನಡೆದಿವೆ. ಆದರೂ ಪ್ರಭಾವಿಗಳ ಕೈವಾಡವಿರುವುದರಿಂದ ಅವರ ವಿರುದ್ಧ ಕ್ರಮಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎನ್ನುವ ಆರೋಪ ಬಲವಾಗಿ ಕೇಳಿಬರುತ್ತಿದೆ.
ಅಕ್ರಮವಾಗಿ ಸಾಗವಾನಿ ನಾಟುಗಳನ್ನು ಸಾಗಿಸುತ್ತಿದ್ದ ವಾಹನವು ಮಂಗಳೂರು ಮೂಲದ್ದಾಗಿದೆ ಎಂದು ತಿಳಿದು ಬಂದಿದ್ದು. ಅಲ್ಲಿಂದ ಇಲ್ಲಿಯವರೆಗೆ ಸುಮಾರು 300 ಕೀ.ಮಿ ಹೆಚ್ಚು ದೂರ ಅಕ್ರಮ ಸಾಗವಾನಿ ನಾಟುಗಳನ್ನು ಹೇರಿಕೊಂಡು ಸಾಗಿ ಬಂದಿದೆ. ಆದರೆ, ಎಲ್ಲಿಯೂ ಅರಣ್ಯ ಇಲಾಖೆಯ ಅಧಿಕಾರಿಗಳು ಆ ವಾಹನವನ್ನು ಪರಿಶೀಲಿಸದೇ ಇರುವುದು ಮಾತ್ರ ವಿಪರ್ಯಾಸ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.