ಗದಗ

ಕಾಯಂ ಪಡಿತರ ಚೀಟಿ ಪಡೆಯಲು ಸೂಚನೆ

Published On :

ಗದಗ:  ಜಿಲ್ಲೆಯ ತಾತ್ಕಾಲಿಕ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳು ಮತ್ತು ಹೊಸದಾಗಿ ಪಡಿತರ ಚೀಟಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದವರು ಜ. 25ರೊಳಗೆ ಕಾಯಂ ಪಡಿತರ ಚೀಟಿ ಪಡೆಯಬೇಕು. ಪಡೆಯದೇ ಇರುವ ಚೀಟಿಗಳನ್ನು ಇಲಾಖೆಯ ತಂತ್ರಾಂಶದಲ್ಲಿ ಸ್ಥಗಿತಗೊಳಿಸಲಾಗುತ್ತದೆ. ಅವರಿಗೆ ಪಡಿತರವೂ ಸಿಗುವುದಿಲ್ಲ. ಜಿಲ್ಲೆಯಲ್ಲಿ ಇನ್ನೂ 23,433 ಕುಟುಂಬಗಳು ಕಾಯಂ ಪಡಿತರ ಚೀಟಿಗಳನ್ನು ಪಡೆದಿಲ್ಲ. ನಗರ, ಪಟ್ಟಣ ಪ್ರದೇಶದ 11,682 ಪಡಿತರ ಚೀಟಿಗಳು ಆಯಾ ತಹಸೀಲ್ದಾರ್ ಕಚೇರಿಗಳಲ್ಲಿ ಹಾಗೂ ನಿಗದಿಪಡಿಸಿದ ಕೇಂದ್ರಗಳಲ್ಲಿ ವಿತರಣೆಗೆ ಇಡಲಾಗಿದೆ. ಆನ್‌ಲೈನ್‌ನಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರ ಪೈಕಿ 15,698 ಪಡಿತರ ಚೀಟಿಗಳು ಗ್ರಾಮಾಂತರ ಪ್ರದೇಶಕ್ಕೆ ಸಂಬಂಧಿಸಿದವು. ನಗರ, ಪಟ್ಟಣ ಪ್ರದೇಶದ 3,017 ಚೀಟಿಗಳು ತಹಸೀಲ್ದಾರ್ ಕಚೇರಿ ಹಾಗೂ ನಿಗದಿತ ಕೇಂದ್ರಗಳಲ್ಲಿ ವಿತರಣೆಗೆ ಸಿದ್ಧವಿವೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಆಲಿಸುವರು ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.