ಮತದಾನ ಎಲ್ಲರ ಜವಾಬ್ದಾರಿ: ಸೌಧಿ
ಮುಂಡರಗಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಒಂದು ಪವಿತ್ರ ಕಾರ್ಯ. ಒಳ್ಳೆಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ಮತದಾರರ ಮೇಲಿದೆ ಎಂದು ಮುಂಡರಗಿ ಸಿಪಿಐ ಸುನಿಲ್ ಸೌಧಿ ಹೇಳಿದರು.
ಅವರು ಶುಕ್ರವಾರ ಪಟ್ಟಣದ ಪುರಸಭೆ ಆವರಣದಲ್ಲಿರುವ ಗಾಂಧಿಭವನದಲ್ಲಿ ತಾಲೂಕು ಆಡಳಿತ ಏರ್ಪಡಿಸಿದ್ದ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಎ.ಟಿ. ನರೇಗಲ್ ಎಲ್ಲರಿಗೂ ಪ್ರಮಾಣ ವಚನ ಬೋಧಿಸಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ತೋಂಟದಾರ್ಯ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯ ಬಿ.ಟಿ. ತಿಪ್ಪೇರುದ್ರಸ್ವಾಮಿ ನೆರವೇರಿಸಿದರು. ಪ್ರೊ. ಎಸ್.ಜಿ. ಕಡ್ಡಿ ಉಪನ್ಯಾಸಕರಾಗಿ ಆಗಮಿಸಿ ಮಾತನಾಡಿದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ಎ.ಕೆ. ಜೈನ್, ತಾಪಂ ಇಓ ಎಸ್.ವಿ. ತಿಗರಿಮಠ, ಬಸವರಾಜ ನವಲಗುಂದ, ಹೇಮಂತಗೌಡ ಪಾಟೀಲ, ದೇವಪ್ಪ ಇಟಗಿ ಮತದಾರರ ದಿನಾಚರಣೆ ಕುರಿತು ಮಾತನಾಡಿದರು. ಗುರುತಿನ ಚೀಟಿ ವಿತರಿಸಲಾಯಿತು. ಪುರಸಭೆ ಅಧ್ಯಕ್ಷ ಶೇಖವ್ವ ಸಂಗಟಿ, ರಜನೀಕಾಂತ ದೇಸಾಯಿ, ರಾಮು ಕಲಾಲ, ಮಂಜುನಾಥ ಇಟಗಿ, ಸುರೇಶ ಮಾಳೆಕೊಪ್ಪ, ಸಿಡಿಪಿಓ ಎಂ.ಎನ್. ನಾಯಕ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

