ಗದಗ

ಸರ್ವಾಂಗೀಣ ಅಭಿವೃದ್ಧಿಯೇ ಗುರಿ

Published On :

ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಜ. 27
ರೋಣ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಮೂಲಮಂತ್ರ. ಈ ನಿಟ್ಟಿನಲ್ಲಿ ಕಳೆದ 9 ವರ್ಷದಲ್ಲಾದ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀರಕ್ಷೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಹೇಳಿದರು.
ಅವರು ಭಾನುವಾರ ಸಮೀಪದ ಗೋಗೇರಿ ಗ್ರಾಮದಲ್ಲಿ ಸುವರ್ಣ ಗ್ರಾಮೋದಯ ಯೋಜನೆ ಅಡಿಯಲ್ಲಿ ನಿರ್ಮಾಣಗೊಂಡ ಸಮುದಾಯ ಭವನ ಹಾಗೂ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಈಗಾಗಲೇ ಕ್ಷೇತ್ರದಾದ್ಯಂತ ಕೆರೆ ನಿರ್ಮಾಣ, ವಸತಿ ಹೀನರಿಗೆ ಸೂರು ಒದಗಿಸುವ ಕಾರ್ಯಕ್ರಮ, ಜತೆಗೆ ತಾಲೂಕಿನ ಜಿಗಳೂರ ಸಮೀಪ ಮಲಪ್ರಭಾ ನದಿಯಿಂದ ರೋಣ, ಗಜೇಂದ್ರಗಡ, ನರೇಗಲ್ಲ ಪಟ್ಟಣಗಳ ವ್ಯಾಪ್ತಿಯ ಜನತೆಗೆ ಶುದ್ಧಕುಡಿವ ನೀರು ಒದಗಿಸುವ ಕಾಮಗಾರಿ, ಅಲ್ಲದೇ ಮತಕ್ಷೇತ್ರದ ಜನತೆ ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಹಾಗೂ ತಾಂತ್ರಿಕ ಮಹಾವಿದ್ಯಾಲಯ ಸೇರಿದಂತೆ 26ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಗಜೇಂದ್ರಗಡ ಪಟ್ಟಣದಲ್ಲಿ ರು. 10ಕೋಟಿ ವೆಚ್ಚದ ಸರ್ಕಾರಿ ಡಿಪ್ಲೋಮಾ ಕಾಲೇಜ್ ಕಟ್ಟಡ ನಿರ್ಮಿಸಲಾಗಿದೆ. ಮುಂಬರುವ ಶೈಕ್ಷಣಿಕ ವರ್ಷದಿಂದ ಗೋಗೇರಿ ಗ್ರಾಮದಲ್ಲಿ ಸರ್ಕಾರಿ ಪಿಯು ಕಾಲೇಜ್ ಆರಂಭಗೊಳ್ಳಲಿದೆ. ಗೊಗೇರಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಶುದ್ಧ ಕುಡಿವ ನೀರಿನ ಘಟಕ ಆರಂಭಿಸಲಾಗುವುದು ಎಂದರು. ಗ್ರಾಪಂ ಅಧ್ಯಕ್ಷ ಹನುಮಪ್ಪ ಕಮ್ಮಾರ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ, ತಾಪಂ ಅಧ್ಯಕ್ಷೆ ಲಲಿತಾ ಪೂಜಾರ, ಗ್ರಾಪಂ ಉಪಾಧ್ಯಕ್ಷೆ ಅನ್ನವ್ವ ಚವ್ಹಾಣ, ಗಜೇಂದ್ರಗಡ ಪುರಸಭೆ ಉಪಾಧ್ಯಕ್ಷ ಭಾಸ್ಕರ ರಾಯಬಾಗಿ, ಬಿಜೆಪಿ ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ಶಬ್ಬೀರ ಅಹ್ಮದ ಖಾಜಿ, ಎಪಿಎಂಸಿ ಸದಸ್ಯ ಅಂಬರೇಶ ಅರಳಿ, ಬಸವರಾಜ ಮೂಲಿಮನಿ, ದೇವೇಂದ್ರಪ್ಪ ಚವ್ಹಾಣ, ಕೇಶಪ್ಪ ಪೂಜಾರ, ಹುಸೇನಸಾಬ ಬಾಗವಾನ, ಶಾಂತಪ್ಪ ಸೊಬರದ, ಮಲ್ಲವ್ವ ಮಡಿವಾಳರ, ಮೌನೇಶಪ್ಪ ಭೋಸಲೆ, ಹನುಮಪ್ಪ ಮಾದರ, ಕಳಕಪ್ಪ ಮೇಟಿ, ಬಸನಗೌಡ ಪಾಟೀಲ, ಖಾಜೇಸಾಬ ನಧಾಪ, ಫಕೀರಪ್ಪ ಮಾದರ, ಸಂಗಪ್ಪ ಗುರಿಕಾರ, ಪಿಡಿಓ ಎಂ.ಆರ್. ಪತ್ತಾರ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.