ಜಾತಿ-ಮತ ಭೇದ ಬೇಡ: ಸ್ವಾಮೀಜಿ
ಗದಗ: ಜಾತಿ-ಮತ ಭೇದವನ್ನು ತೊಡೆದು ಎಲ್ಲರೂ ನಮ್ಮವರೆಂದು ಒಪ್ಪಿಕೊಂಡು ಹೋಗುವ ಸಂಸ್ಕೃತಿಯನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಹೊಸಹಳ್ಳಿಯ ಅಭಿನವ ಬೂದೀಶ್ವರ ಶ್ರೀಗಳು ಹೇಳಿದರು.
ಅವರು ತಾಲೂಕಿನ ಹೊಸಹಳ್ಳಿ ಬೂದೀಶ್ವರ ಸಂಸ್ಥಾನಮಠದ ಆವರಣದಲ್ಲಿ ಗದಗನ ನೋಬೆಲ್ ಜನಾಭಿವೃದ್ಧಿ ಪ್ರೊಜೆಕ್ಟ್ಸ್, ಅಗಸ್ತ್ಯ ಫೌಂಡೇಶನ್ ಹಾಗೂ ಪೂಜಾರ ಬಳಗದ ಆಶ್ರಯದಲ್ಲಿ ಅಭಿನವ ಬೂದೀಶ್ವರ ಶ್ರೀಗಳ ಹುಟ್ಟುಹಬ್ಬದ ಅಂಗವಾಗಿ ಗುರುವಾರ ಹಮ್ಮಿಕೊಂಡ ದತ್ತು ಮಕ್ಕಳ ದಿನಾಚರಣೆ ಹಾಗೂ ತುಲಾಭಾರ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಭಕ್ತರು ಮಠಗಳನ್ನು ಕಟ್ಟಿದರೆ, ಮಾಠಾಧೀಶರು ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತಾರೆ. ಕಾರಣ ಮಠಮಾನ್ಯಗಳು ಮಾಡುವ ಧಾರ್ಮಿಕ ಕಾರ್ಯಗಳಿಗೆ ಭಕ್ತರು ತುನು ಮನದಿಂದ ಸೇವೆ ಸಲ್ಲಿಸಬೇಕು ಎಂದರು.
ಡಿಡಿಪಿಐ ಬಿ.ವಿ. ರಾಜೇಂದ್ರಪ್ರಸಾದ, ಗದುಗಿನ ವಿದ್ಯಾದಾನ ಸಮಿತಿ ಕಾರ್ಯಾಧ್ಯಕ್ಷ ಶ್ರೀನಿವಾಸ ಹುಯಿಲಗೋಳ, ದತ್ತು ವಿದ್ಯಾರ್ಥಿನಿ ಶ್ವೇತಾ ಈರಗಾರ ಮಾತನಾಡಿದರು. ಇದೇ ಸಂದರ್ಭದಲ್ಲಿ ನವಲಗುಂದ ಕಾಂಗ್ರೆಸ್ ಯುವ ಮುಖಂಡ ಬಿ.ಕೆ. ಮಹೇಶ, ಅಣ್ಣಿಗೇರಿ ಪುರಸಭೆ ಸದಸ್ಯ ಮಲ್ಲಿಕಾರ್ಜುನ ನವಲಗುಂದ, ಜಿಲ್ಲಾ ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಶಾಂತ ವರಗಪ್ಪನವರ, ಹನುಮಂತಪ್ಪ ಕಂಬಳಿ ಅವರನ್ನು ಸನ್ಮಾನಿಸಲಾಯಿತು. ನಂತರ ಹೊಸಹಳ್ಳಿ ಗ್ರಾಮದ ಬಸವರಾಜ ಅಂಗಡಿ ಅವರಿಂದ ಅಭಿನವ ಬೂದೀಶ್ವರ ಶ್ರೀಗಳಿಗೆ ತುಲಾಭಾರ ಕಾರ್ಯಕ್ರಮ ನಡೆಯಿತು. ನಂತರ ಮಕ್ಕಳಿಂದ ಕೇಕ್ ಕತ್ತರಿಸುವ ಮೂಲಕ ಶ್ರೀಗಳು ಹುಟ್ಟುಹಬ್ಬವನ್ನು ಆಚರಿಸಿಕೊಂಡರು.
ಬೂದೀಶ್ವರ ವಿದ್ಯಾಪೀಠದ ಆಡಳಿತಾಧಿಕಾರಿ ಎಸ್.ಎಸ್. ಬೆಟಗೇರಿ ಅಧ್ಯಕ್ಷತೆ ವಹಿಸಿದ್ದರು. ಮುದಕಯ್ಯಶಾಸ್ತ್ರಿ ಮರೋಳ, ಶಂಕರ ಹೂಗಾರ, ಐ.ಬಿ. ಬೆನಕೊಪ್ಪ, ಕೆ.ಎಸ್. ಜೈನ್, ಕುರ್ತಕೋಟಿ ಗ್ರಾಪಂ ಅಧ್ಯಕ್ಷ ಅಪ್ಪಣ್ಣ ಇನಾಮತಿ, ಎಸ್.ಸಿ. ಹೆದ್ದೂರಿ, ಡಾ. ಡಿ.ಎಲ್. ಪಾಟೀಲ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

