ಕಳಪೆ ಆಹಾರ ಪೂರೈಕೆ: ಆರೋಪ
ಶಿರಹಟ್ಟಿ: ತಾಲೂಕಿನ ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಅವಧಿ ಮೀರಿದ ಪೌಷ್ಟಿಕ ಆಹಾರ ನೀಡುತ್ತಿದ್ದಾರೆಂದು ಜಿಲ್ಲಾ ಬಿಜೆಪಿ ಎಸ್ಸಿ ಘಟಕದ ಅಧ್ಯಕ್ಷ ಜಾನು ಲಮಾಣಿ ಆರೋಪಿಸಿದ್ದಾರೆ.
ಶಿಶು ಅಭಿವೃದ್ಧಿ ಇಲಾಖೆ ಕಚೇರಿಗೆ ತೆರಳಿದ ಅವರು, ಅವಧಿ ಮೀರಿದ ಪೌಷ್ಟಿಕ ಆಹಾರದ ಪ್ಯಾಕೆಟ್ ತೋರಿಸಿ, ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಆದರೆ, ಗುರುವಾರ ಹರಿಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದಾಗ, ಮೇ 31ಕ್ಕೆ ಅವಧಿ ಮುಗಿದ ಸತ್ವರಹಿತ, ತೌಡು ಮಿಶ್ರಿತ ಕಳಪೆ ಗೋದಿ ರವೆ ನೀಡಿದ್ದು ಗಮನಕ್ಕೆ ಬಂದಿದೆ ಎಂದು ವಿವರಿಸಿದ್ದಾರೆ. ಪಾಲಕರು ಹತ್ತಾರು ಬಾರಿ ದೂರಿದರೂ ಶಿಶು ಅಭಿವೃದ್ಧಿ ಅಧಿಕಾರಿ ಸರಸ್ವತಿ ಹೊನ್ನೇಗೌಡರ ಅಥವಾ ಅಂಗನವಾಡಿ ಮೇಲ್ವಿಚಾರಕಿ ಗಂಭೀರವಾಗಿ ಪರಿಗಣಿಸಿಲ್ಲ. ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿಲ್ಲ. ಕಳಪೆ ಆಹಾರ ಪೂರೈಸುತ್ತಿರುವ ಏಜೆನ್ಸಿಗೆ ಎಚ್ಚರಿಕೆ ನೀಡುತ್ತಿಲ್ಲ. ಇವರೆಲ್ಲರೂ ಮಕ್ಕಳ ಜೀವದ ಜತೆಗೆ ಆಟವಾಡುತ್ತಿದ್ದಾರೆ ಎಂದು ಲಮಾಣಿ ಆರೋಪಿಸಿದರು.
ಕೆಲವೆಡೆ ಮಧ್ಯಾಹ್ನ 12 ಗಂಟೆಗೇ ಅಂಗನವಾಡಿ ಕೇಂದ್ರಗಳಿಗೆ ಬೀಗ ಜಡಿದಿರುತ್ತಾರೆ. ತಾಯಂದಿರು ಮಕ್ಕಳನ್ನು ಕಳುಹಿಸಿ ಹೊಲದ ಕೆಲಸಕ್ಕೆ ಹೋಗಿರುತ್ತಾರೆ. ಇಂಥ ಹೊತ್ತಲ್ಲಿ ಮಕ್ಕಳು ಹಸಿವಿನಿಂದ ಅಳುತ್ತಾ ಮನೆಗೆ ಮರಳುತ್ತವೆ. ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಎಲ್ಲ ಅಂಗನವಾಡಿಗಳಲ್ಲೂ ಸಿಗುವಂತೆ ವ್ಯವಸ್ಥೆ ಮಾಡಬೇಕು ಎಂದು ಜಾನು ಲಮಾಣಿ, ಷಣ್ಮುಖ ಪೂಜಾರ, ಶೇಖರ ಲಮಾಣಿ, ನಿಂಗಪ್ಪ ಲಮಾಣಿ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

