ಕಾಲೇಜಿಗೆ ಸೌಲಭ್ಯ ಕಲ್ಪಿಸಿ
ಗಜೇಂದ್ರಗಡ: ಸ್ಥಳೀಯ ಎಸ್.ಎಂ. ಭೂಮರಡ್ಡಿ ಪದವಿ ಮಹಾವಿದ್ಯಾಲಯಕ್ಕೆ ಮೂಲ ಸೌಕರ್ಯ ಒದಗಿಸಲು ಆಗ್ರಹಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಎಸ್ಎಫ್ಐ ಸಂಘಟನೆ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಕಾಲೇಜು ಪ್ರಾಚಾರ್ಯರಿಗೆ ಮನವಿ ಸಲ್ಲಿಸಿದರು.
ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮೀಣ ಪ್ರದೇಶದ ನೂರಾರು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ನೆರವಾಗಬೇಕಾಗಿದ್ದ ಎಸ್.ಎಂ. ಭೂಮರಡ್ಡಿ ಪದವಿ ಮಹಾವಿದ್ಯಾಲಯದಲ್ಲಿ ಮೂಲಸೌಲಭ್ಯ ದೊರೆಯದೆ. ತೀವ್ರ ತೊಂದರೆ ಅನುಭವಿಸುವಂತಾಗಿದೆ. ಈ ಕುರಿತು ಹಲವಾರು ಬಾರಿ ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.
ಭೂಮರೆಡ್ಡಿ ಕಾಲೇಜಿನಲ್ಲಿ ಸೌಲಭ್ಯ ಸಿಗುತ್ತದೆಂಬ ಆಶಾಭಾವನೆಯಿಂದ ಡೋನೆಶನ್ ನೀಡಿ ಇಲ್ಲಿ ಪದವಿ ಶಿಕ್ಷಣ ಪಡೆಯಲು ಬಂದರೆ ಇಲ್ಲಿ ಮೂಲಸೌಲಭ್ಯಗಳು ಮರೀಚಿಕೆಯಾಗಿ ಕಾಲೇಜು ಹಾಳು ಕೊಂಪೆಯಂತಿದೆ. ಕೂಡಲೇ ಆಡಳಿತ ಮಂಡಳಿ ಎಚ್ಚೆತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶಿಥಿಲಗೊಂಡಿರುವ ಮೇಲ್ಛಾವಣಿ, ಕಾಲೇಜು ಸಮಯ ಬದಲಾವಣೆ, ಗ್ರಂಥಾಲಯ ಕೊಠಡಿ ವಿಸ್ತರಣೆ ಹಾಗೂ ಪಠ್ಯಪುಸ್ತಕ, ದಿನಪತ್ರಿಕೆ, ವಾರ ಪತ್ರಿಕೆ, ಮಾಸಪತ್ರಿಕೆ ಒದಗಿಸಬೇಕು.
ಕಾಲೇಜು ಪ್ರಾಚಾರ್ಯ ಉಮೇಶ ಶಿರೋಳ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಮೂಲಸೌಲಭ್ಯದ ಜತೆಗೆ ಉತ್ತಮ ಶಿಕ್ಷಣ ನೀಡುವುದು ನಮ್ಮ ಸಂಸ್ಥೆಯ ಮೊದಲಾದ್ಯತೆಯಾಗಿದ್ದು, ಈ ನಡುವೆ ಕೆಲವು ಅಚಾತುರ್ಯದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದಲ್ಲಿ ಕೂಡಲೇ ಸರಿ ಪಡಿಸಲು ಆಡಳಿತ ಮಂಡಳಿ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ತರಗತಿಗೆ ಹಾಜರಾದರು.
ಎಸ್ಎಫ್ಐ ಜಿಲ್ಲಾಧ್ಯಕ್ಷ ಶಿವು ಚವ್ಹಾಣ, ಡಿವೈಎಫ್ಐ ಮುಖಂಡ ಬಾಲು ರಾಠೋಡ, ಬಾಲಕೃಷ್ಣ ಜಾಡಬಂಡಿ, ದಾವಲಸಾಬ ತಾಳಿಕೋಟಿ, ಶಿವಾಜಿ ಗಡ್ಡದ, ಅಶೋಕ ಉಕ್ಕಿಸಲ, ಪ್ರಕಾಶ ಹೆಳವರ, ಶರಣಯ್ಯ ಸೂಗೀರಯ್ಯನಮಠ, ಮಂಜು ಕಲಾಲ ಪ್ರತಿಭಟನೆಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

