ಆಶ್ರಮ ಶಾಲೆ ಉಳಿಸಲು ಪ್ರತಿಭಟನೆ
ಗದಗ: ಸರ್ಕಾರಿ ಆಶ್ರಮ ಶಾಲೆಗಳ ಉಳಿವಿಗೆ ಆಗ್ರಹಿಸಿ ಸೋಮವಾರ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಭಾರತ ಪ್ರಜಾಸತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ) ಗದಗ ಜಿಲ್ಲಾ ಸಮಿತಿ ಪದಾಧಿಕಾರಿಗಳು ಸೋಮವಾರ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ 2 ಆಶ್ರಮ ಶಾಲೆಗಳಿವೆ. ಗಜೇಂದ್ರಗಡದ ಆಶ್ರಮ ಶಾಲೆ ಮತ್ತು ಶಿಗ್ಲಿ ಗ್ರಾಮದ ಆಶ್ರಮ ಶಾಲೆಯಲ್ಲಿ ಇಂದಿಗೂ 100ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ 2012ರಲ್ಲಿ ರಾಜ್ಯ ಬಿಜೆಪಿ ಸರ್ಕಾರವು ಆಶ್ರಮ ಶಾಲೆಗಳನ್ನು ಮುಚ್ಚಲು ಹೊರಟಿರುವುದನ್ನು ವಿರೋಧಿಸಿ ಎಸ್ಎಫ್ಐ ಹಾಗೂ ಡಿವೈಎಫ್ಐ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ಮಾಡಿ ಆಶ್ರಮ ಶಾಲೆಗಳನ್ನು ಉಳಿಸಲಾಗಿದೆ. ಆದರೆ ಈ ವರ್ಷ ಸಂಪೂರ್ಣವಾಗಿ ಆಶ್ರಮ ಶಾಲೆಗಳನ್ನು ಬಂದ್ ಮಾಡಿರುವುದು ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ನೋವಿನ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೇಡಿಕೆಗಳು: ಗಜೇಂದ್ರಗಡದ ಸರ್ಕಾರಿ ಆಶ್ರಮ ಶಾಲೆಯನ್ನು ಆರಂಭಿಸಬೇಕು. ಆಶ್ರಮ ಶಾಲೆಯ 1ನೇ ತರಗತಿಯಿಂದ 5 ನೇ ತರಗತಿಯ ವರೆಗೂ ಪ್ರವೇಶ ನೀಡಬೇಕು. ಸರ್ಕಾರಿ ಆಶ್ರಮ ಶಾಲೆಯ ಮಕ್ಕಳಿಗೆ ಬೆಳಗ್ಗೆ ಹಾಲು ವಿತರಿಸಬೇಕು. ಶಿಕ್ಷಣದ ಹಕ್ಕು ಕಾಯ್ದೆ ಅನುಗುಣವಾಗಿ ಶಿಕ್ಷಣಕ್ಕೆ ಬೇಕಾದ ಸಮರ್ಪಕ ಸೌಲಭ್ಯ ಒದಗಿಸಬೇಕು. ಹುಟ್ಟಿನಿಂದ 18 ವರ್ಷದ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಎಲ್ಲರಿಗೂ ಕೊಡಬೇಕು. ಶಿಕ್ಷಣದ ಹಕ್ಕು ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳನ್ನು ಕೆಲಸದಿಂದ ವಜಾಗೊಳಿಸಬೇಕು. ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ಆಶ್ರಮ ಶಾಲೆಯಿಂದ ಹೊರಹಾಕಿರುವುದು ಏಕೆ ಇದಕ್ಕೆ ಉತ್ತರ ನೀಡಬೇಕು. ಈ ಎಲ್ಲ ಬೇಡಿಕೆಗಳನ್ನು ತಕ್ಷಣ ಈಡೇರಿಸದಿದ್ದಲ್ಲಿ ಉಗ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ. ಸಂಘಟನೆ ಸಹ ಸಂಚಾಲಕ ಪೀರು ರಾಠೋಡ, ಎಸ್.ಎಫ್.ಐ. ಜಿಲ್ಲಾಧ್ಯಕ್ಷ ಶಿವು ಚವ್ಹಾಣ, ಕಳಕೇಶ ಉಕ್ಕಿಸಲ, ಶಿವಾನಂದ ಬೋಸ್ಲೆ, ಶಿವಾಜಿ ಗಡ್ಡದ, ಪ್ರಕಾಶ ಹೇಳವಾರ, ಮಾನವ್ವ ರಾಠೋಡ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

