ಗದಗ

ಗದಗ: ಎರಡು ಗುಂಪುಗಳ ಮಧ್ಯೆ ಮಾರಾಮಾರಿ

Published On :

ಗದಗ: ನಗರದ ಎಪಿಎಂಸಿ ಭಾಗದಲ್ಲಿರುವ ಮಹೇಂದ್ರಾ ಶೋ ರೂಂ ಬಳಿ ಸೋಮವಾರ ಮಧ್ಯಾಹ್ನ ಎರಡು ಗುಂಪುಗಳ ಮಧ್ಯೆ ಸಿನಿಮೀಯ ರೀತಿಯಲ್ಲಿ ಮಾರಾಮಾರಿ ನಡೆದಿದ್ದು, ಏಕಾಏಕಿ ನಡೆದ ಈ ಘಟನೆಯಿಂದ ಸ್ಥಳದಲ್ಲಿ ಸಾರ್ವಜನಿಕರು ಕಕ್ಕಾಬಿಕ್ಕಿಯಾದರು.
ಘಟನೆಯ ವೇಳೆಯಲ್ಲಿ ಒಂದು ಗುಂಪಿನ ಜನರು ಸಿನಿಮೀಯ ರೀತಿಯಲ್ಲಿ ವಾಹನದಲ್ಲಿ ಬಂದು, ಮಚ್ಚು, ಬಡಿಗೆ ಸೇರಿದಂತೆ ಮಾರಕಾಸ್ತ್ರಗಳಿಂದ ಇನ್ನೊಂದು ಗುಂಪಿನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ವೇಳೆ ವ್ಯಕ್ತಿಯೋರ್ವನನ್ನು ವಾಹನದಲ್ಲಿ ಕರೆದುಕೊಂಡು ಹೋದ ಘಟನೆಯಿಂದ ಇದೊಂದು ಅಪಹರಣ ಇರಬಹುದು ಎಂದು ಸಾರ್ವಜನಿಕರು ಚರ್ಚಿಸುತ್ತಿರುವುದು ಅಲ್ಲಲ್ಲಿ ಕೇಳಿ ಬಂತು, ಈ ಘಟನೆಗೆ ಸ್ಪಷ್ಟವಾದ ಕಾರಣ ಏನು ಎನ್ನುವುದು ಇಲ್ಲಿಯವರೆಗೂ ತಿಳಿದು ಬಂದಿಲ್ಲ. ಘಟನೆಯಲ್ಲಿ ಶೋ ರೂಂನ ಸಮೀಪದಲ್ಲಿಯೇ ನಿಲ್ಲಿಸಲಾಗಿದ್ದ ಕಾರಿನ ಕಿಟಕಿಯ ಗಾಜುಗಳನ್ನು ಒಡೆಯಲಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬೆಟಗೇರಿ ಬಡಾವಣೆ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಡಾವಣೆ ಪೊಲೀಸ್ ಠಾಣೆಯಲ್ಲಿ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.