ಹಲ್ಲೆಗೊಳಗಾದ ಯುವಕ ಸಾವು
ಗುಲ್ಬರ್ಗ: ಬುಧವಾರ ಬೆಳಗ್ಗೆ ಮಾರಕಾಸ್ತ್ರದಿಂದ ಹಲ್ಲೆಗೊಳಗಾದ ಬೋರಾಬಾಯಿ ನಗರದ ಯುವಕ ಬುಧವಾರ ರಾತ್ರಿ ಮೃತಪಟ್ಟಿದ್ದಾನೆ.
ಬೋರಾಬಾಯಿ ನಗರದ ಗಣೇಶ ತಂದೆ ಮಲ್ಲಿಕಾರ್ಜುನ ಕಡೆಹಳ್ಳಿ ಎಂಬ ಯುವಕ ಮೃತಪಟ್ಟವನು. ಅದೇ ಬಡಾವಣೆಯ ಕಾಶಿನಾಥ ಎಂಬಾತ ಬೆಳಗ್ಗೆ ತಲವಾರದಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದನು. ತೀವ್ರವಾಗಿ ಗಾಯಗೊಂಡ ಗಣೇಶನಿಗೆ ನಗರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಸೋಲಾಪುರಕ್ಕೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ. ಈ ಕುರಿತು ರಾಘವೇಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾದಚಾರಿ ಸಾವು
ಗುಲ್ಬರ್ಗ: ಜೇವರ್ಗಿ ತಾಲೂಕಿನ ಮಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎದುರಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಟಾಟಾ ಎಸಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟ ಘಟನೆ ನಡೆದಿದೆ. ಎಸ್. ಮಳ್ಳಿ ಗ್ರಾಮದ ಯಮನಪ್ಪ ತಂದೆ ಮಲಕಪ್ಪ ಕಟ್ಟಿಮನಿ ಎಂಬಾತ ಮೃತಪಟ್ಟ ನತದೃಷ್ಟ. ಈತ ಶಾಲೆಯ ಎದುರಿನಿಂದ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಟಾಟಾ ಎಸಿ ವಾಹನ ಡಿಕ್ಕಿ ಹೊಡೆದಾಗ ತೀವ್ರ ಗಾಯಗೊಂಡ ಯಮನಪ್ಪನಿಗೆ ಬಸವೇಶ್ವರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಕೊನೆಯುಸಿರೆಳೆದಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

