ಕಾಟಾಚಾರದ ಹಂಚಿಕೆ
ಯಾದಗಿರಿ: ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಬಸವ ವಸತಿ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮನೆ ನೀಡುವಂತೆ ನ್ಯಾಯವಾದಿ ವಿಶ್ವನಾಥ ಆಸಪಕರ್ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ರಾಮ ಪಂಚಾಯಿತಿಗೆ 350 ಮನೆಗಳು ಕಳೆದ 8 ತಿಂಗಳ ಹಿಂದೆಯೇ ಮಂಜೂರಾಗಿವೆ. ಇಲ್ಲಿಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾಟಾಚಾರಕ್ಕೆ ಗ್ರಾಮಸಭೆ ನಡೆಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡದೆ ತಮ್ಮ ಆಪ್ತರಿಗೆ ಒಂದು ಮನೆಗೆ 3ರಿಂದ 5 ಸಾವಿರ ಪಡೆದು ಮನೆಗಳ ಆಯ್ಕೆ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿದ್ದಾರೆ. ಅಂದು ನಡೆದ ಸಭೆಗೆ ಗ್ರಾಮದ 50ಕ್ಕೂ ಹೆಚ್ಚು ಜನ ಭಾಗವಹಿಸಿ ತಮ್ಮ ಹೆಸರನ್ನು ಆಯ್ಕೆ ಪಟ್ಟಿಯಲ್ಲಿ ಹೆಸರು ನೋಂದಾಯಿಸಿದ್ದರು. ಆದರೆ ನಂತರ ದಿನಗಳಲ್ಲಿ ನೋಂದಾಯಿಸಲ್ಪಟ್ಟ ಹೆಸರುಗಳಲ್ಲಿ ಕೇವಲ 15 ಕುಟುಂಬಗಳ ಹೆಸರುಗಳಿವೆ. ಉಳಿದ 335 ಮನೆಗಳನ್ನು ತಮಗೆ ಬೇಕಾದವರ ಹೆಸರು ಸೇರಿಸಿ ಆಯ್ಕೆ ಪಟ್ಟಿ ಮೇಲಾಧಿಕಾರಿಗಳಿಗೆ ಸಲ್ಲಿಸಿ ನಿಜವಾದ ಫಲಾನುಭವಿಗಳಿಗೆ ಅನ್ಯಾಯವೆಸಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅರ್ಹ ಫಲಾನುಭವಿಗಳಿಗೆ ಮನೆ ವಿತರಿಸಲು ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.
ಟ್ರಾಫಿಕ್ ಸಿಗ್ನಲ್ ದುರಸ್ತಿಗೆ ಆಗ್ರಹ
ಯಾದಗಿರಿ: ನಗರದಲ್ಲಿ ಅಳವಡಿಸಿ ಟ್ರಾಫಿಕ್ ಸಿಗ್ನಲ್ಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಅಪಘಾತ ಸಂಖ್ಯೆ ಹೆಚ್ಚಾಗುತ್ತಿದ್ದು, ಕೂಡಲೇ ಈ ಸಮಸ್ಯೆಗೆ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಜೈಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಮಂಗಳವಾರ ಡಿಸಿಗೆ ಮನವಿ ಸಲ್ಲಿಸಲಾಯಿತು. ಬಾಪುಗೌಡ ಮುಸ್ಟೂರ ಮಾತನಾಡಿ, ಕಳೆದ ಕೆಲ ದಿನಗಳಿಂದ ನಗರದ ಪ್ರಮುಖ ವೃತ್ತಗಳಾದ ಸುಭಾಷ್ ವೃತ್ತ ಮತ್ತು ಶಾಸ್ತ್ರಿ ಚೌಕಗಳಲ್ಲಿನ ಟ್ರಾಫಿಕ್ ಸಿಗ್ನಲ್ಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಹೀಗಾಗಿ ಪ್ರತಿದಿನ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಇದರಿಂದ ಮುಖ್ಯ ರಸ್ತೆಯ ಮೇಲೆ ನಡೆದಾಡಲು ಪಾದಾಚಾರಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಸಂಘಟನೆ ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಕಾಂತ ಭೀಮನಳ್ಳಿ, ರಾಘು ಗುತ್ತೇದಾರ್, ಧರ್ಮಣ್ಣ ಗಿರೆಪ್ಪನೂರ, ಕೃಷ್ಣಾರಡ್ಡಿ ಬಬಲಾದ, ಚೇತನ ಮಿಲ್ಟ್ರಿ, ಧನರಾಜ ತಂಗಡಿಗಿ ಮತ್ತಿತರರು ಇದ್ದರು.
ಡಿಕ್ಕಿ: ಸವಾರ ಸಾವು
ಯಾದಗರಿ: ನಗರದ ಸುಭಾಷ ವೃತ್ತದ ಬಳಿ ಬೈಕ್ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳವಾರ ಜರುಗಿದೆ. ಶಹಾಪುರ ದಿಗ್ಗಿ ಬೇಸ್ನ ಬಾಬು(38) ಮೃತನು. ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾನೆ. ನಗರ ಠಾಣೆ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

