ಗುಲ್ಬರ್ಗಾ

'ಹತ್ತರ ಭಯ ಹತ್ತಿರ ಬೇಡ' ಕಾರ್ಯಕ್ರಮ

Published On :

ಗುಲ್ಬರ್ಗ: ಎಸ್‌ಎಸ್‌ಎಲ್‌ಸಿ ಸೇರಿದಂತೆ ಎಲ್ಲ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳು ಭಯಗೊಳ್ಳದೆ ಆತ್ಮ ವಿಶ್ವಾಸ, ಆನಂದದಿಂದ ಎದುರಿಸಬೇಕು. ಸರಳತೆಯಿಂದ ಸಂಕೀರ್ಣತೆ ಕಡೆಗೆ ಸಾಗಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಸೈಯದ್ ಅಬ್ದುಲ್ ರಬ್ ಹೇಳಿದರು.
ವಿಶ್ವಜ್ಯೋತಿ ಪ್ರತಿಷ್ಠಾನ ಗುಲ್ಬರ್ಗ ಮತ್ತು ಯಾದಗಿರಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬುವುದರ ಜತೆಗೆ ಪರೀಕ್ಷೆ ಎದುರಿಸುವ ಬಗ್ಗೆ ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಹತ್ತರ ಭಯ- ಹತ್ತಿರ ಬೇಡ ಎಂಬ ಸರಣಿ ಕಾರ್ಯಕ್ರಮಕ್ಕೆ ನಗರದ ಪುರುಷ ಮಠದ ಚನ್ನಮಲ್ಲೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ಪರೀಕ್ಷೆಗೆ ಸಮಾಲೋಚನೆ, ಚರ್ಚೆ ಮೂಲಕ ಸಜ್ಜಾಗಬೇಕೆಂದು ಕಿವಿಮಾತು ಹೇಳಿದರು. ಅದಕ್ಕೆ ಪೋಷಕರು ಸಹಕಾರ ನೀಡಬೇಕೆ ಹೊರತು ಇಂತದ್ದನ್ನು ಓದಿ ಎಂದು ಮಕ್ಕಳ ಮೇಲೆ ಒತ್ತಡ ಹೇರಬೇಡಿ ಎಂದು ತಿಳಿಸಿದರು.
ಉಪನ್ಯಾಸ ನೀಡಿದ ಸಾಹಿತಿ ಜಗನ್ನಾಥ ತರನಳ್ಳಿ, ಪರಿಪೂರ್ಣ ಅರಿವು ಮನಸ್ಸಿನ ಆತಂಕ ದೂರ ಮಾಡಿ ಗೊಂದಲ ನಿವಾರಣೆ ಮಾಡುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕೆಂದು ಹೇಳಿದರು. ಪರುಷ ಮಠದ ಅಭಿನವ ಚನ್ನಮಲ್ಲ ಶಿವಾಚಾರ್ಯ ಸನ್ನಿದಾನ ವಹಿಸಿದ್ದರು. ಪ್ರತಿಷ್ಠಾನ ಅಧ್ಯಕ್ಷ ವಿಜಯಕುಮಾರ ತೇಗಲಸಿಪ್ಪಿ ಪ್ರಾಸ್ತಾವಿಕ ಮಾತನಾಡಿದರು. ಸಂಸ್ಥೆಯ ಉಪಾಧ್ಯಕ್ಷ ಸಿದ್ದರಾಮಪ್ಪ ಉಕ್ಕಲಿ ಅಧ್ಯಕ್ಷತೆ ವಹಿಸಿದ್ದರು. ಚನ್ನಮಲ್ಲಯ್ಯ ಹಿರೇಮಠ, ಶ್ರೀಕಾಂತಗೌಡ ತಿಳಗೂಳ, ಮಾಜಿ ಮೇಯರ್ ಸಂಜಯ್ ಸಿಂಗ್, ಬಿ.ಎಂ. ಪಾಟೀಲ್ ಅರುಣಕುಮಾರ, ಅಕ್ಷತಾ ಈರಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.