ಗುಲ್ಬರ್ಗಾ

'ಆರೋಗ್ಯ ಕೇಂದ್ರಕ್ಕೆ 1.10 ಕೋಟಿ'

Published On :

ಜೇವರ್ಗಿ: ತಾಲೂಕಿನ ವಡಗೇರಾ ಗ್ರಾಮದಲ್ಲಿ ಭಾನುವಾರ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ವಿವಿಧ ಅಭಿವೃದ್ಧಿಕಾಮಗಾರಿಗಳಿಗೆ ಚಾಲನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬಸವಂತ್ರಾಯಗೌಡ ಪೊಲೀಸ್ ಪಾಟೀಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಡಿಗಲ್ಲು ನೆರವೇರಿಸಿ ಮಾತನಾಡಿದ ಶಾಸಕ ನರಿಬೋಳ, ಈ ಭಾಗದ ಹತ್ತಾರು ಹಳ್ಳಿಗಳ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 1.10 ಕೋಟಿ ಬಿಡುಗಡೆಗೊಳಿಸಲಾಗಿದೆ ಎಂದರು.
ಗ್ರಾಮದ ಕುಡಿವ ನೀರಿಗಾಗಿ 50 ಲಕ್ಷ, ಸಿಸಿ ರಸ್ತೆಗೆ 10 ಲಕ್ಷ, ವಡಗೇರಾ- ಮಳ್ಳಿ ಗ್ರಾಮದ ಐಕಟ್ಟಾ ರಸ್ತೆಗೆ 28 ಲಕ್ಷ, ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ 2 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದರು.  ಮುಖ್ಯಮಂತ್ರಿ ಶೆಟ್ಟರ್ ಅವರು ಹೆಚ್ಚಿನ ಕಾಳಜಿ ವಹಿಸುವುದರ ಮೂಲಕ ಯಡ್ರಾಮಿಯನ್ನು ತಾಲೂಕ ಕೇಂದ್ರವನ್ನಾಗಿ ಘೋಷಣೆ ಮಾಡಿರುವುದು ಈ ಭಾಗದ ಜನರ ದಶಕಗಳ ಕನಸು ಈಡೇರಿಸದಂತಗಿದೆ. ಮಲ್ಲಾಬಾದ ಏತನೀರಾವರಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ನಾವು ಶಾಸಕರಾದ ಮೇಲೆ ತಾಲೂಕಿನ ಎಲ್ಲಾ ಹಳ್ಳಿಗಳಿಗೆ ಅನುದಾನ ನೀಡಲಾಗಿದೆ ಎಂದರು.
ವಡಗೇರಾ ಗ್ರಾಪಂ ಅಧ್ಯಕ್ಷೆ ಪದ್ಮಾವತಿ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷ ಶರಣಗೌಡ ಮದ್ರಕಿ, ಮಲ್ಲಿಕಾರ್ಜುನ ಕುಸ್ತಿ, ಶಾಂತಗೌಡ ಸಾವಳಗಿ, ರಮೇಶಬಾಬು ವಕೀಲ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.