ಕಂದಕೂರಗೆ ಮಾದಿಗ ಸಮಾಜದಿಂದ ಸನ್ಮಾನ
ಯಾದಗಿರಿ: ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಭೀಮರಾಯ ಕಂದಕೂರ ಅವರನ್ನು ಜಿಲ್ಲಾ ಮಾದಿಗ ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಮುಖಂಡ ಮಲ್ಲಣ್ಣ ದಾಸನಕೇರಿ, ಜಿಲ್ಲೆಯಲ್ಲಿನ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಶಿಕ್ಷಣದಲ್ಲಿ ಹಿಂದುಳಿದ ಎಂಬ ಪಟ್ಟಿಯಿಂದ ಅಳಿಸಲು ಸತತ ಪ್ರಯತ್ನ ಮಾಡಬೇಕು ಎಂದರು. ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಚಿದಾನಂದ ಕಿಲ್ಲನಕೇರಾ, ರಾಜು ಹೊಸಳ್ಳಿಕರ್, ಭೀಮರಾಯ ಬಸವಂತಪೂರ, ಶೇಖರ ದುಪ್ಪಲ್ಲಿ, ಜೀವನ ಹೊಸಳ್ಳಿ, ಅಬ್ರಹಾಂ ಇದ್ದರು.
ತಿಂಥಣಿ ಜಾತ್ರೆ, ಮದ್ಯ ಮಾರಾಟ ನಿಷೇಧ
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಮೌನೇಶ್ವರ ಜಾತ್ರೆ ಸುಗಮವಾಗಿ ನಡೆಯಲು ಅನುವಾಗುವಂತೆ ತಿಂಥಣಿ ದೇವಸ್ಥಾನದ ಜಾತ್ರಾ ಸ್ಥಳದ ವ್ಯಾಪ್ತಿಯಲ್ಲಿ ಫೆ.19ರ ಮಧ್ಯರಾತ್ರಿಯಿಂದ ಫೆ.25ರ ಮಧ್ಯರಾತ್ರಿವರೆಗೆ ಮದ್ಯಪಾನ, ಮದ್ಯ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಅವರು ಆದೇಶ ಹೊರಡಿಸಿದ್ದಾರೆ.
ರಾಷ್ಟ್ರಪತಿ ಪದಕ ವಿಜೇತರಿಗೆ ಸನ್ಮಾನ
ಸುರಪುರ: ಇಲ್ಲಿಯ ಗೃಹ ರಕ್ಷಕ ದಳದ ಕಮಾಂಡರ್ ಯಲ್ಲಪ್ಪ ಹುಲಿಕಲ್ ಅವರು ಇತ್ತೀಚೆಗೆ ರಾಷ್ಟ್ರಪತಿ ಪದಕ ಪುರಸ್ಕೃತಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪ್ರಗತಿಪರ ಚಿಂತಕರ ಮಹಾಸಭಾ ಸನ್ಮಾನಿಸಿತು. ಮಹಾಸಭಾದ ಸಂಸ್ಥಾಪಕ ಅಧ್ಯಕ್ಷ ಎಂ. ರಾಮಕೃಷ್ಣ ಸನ್ಮಾನಿಸಿದರು. ಮಹಾಸಭಾ ಮುಖಂಡರಾದಚೌಡಯ್ಯ, ಎಂ.ಗಂಗಾಧರ, ಸುಜಾತ ಇದ್ದರು.
ಇಂದು ಕೆಜೆಪಿ ಸಭೆ
ಯಾದಗಿರಿ: ನಗರಸಭೆ ಚುನಾವಣೆ ಪ್ರಯುಕ್ತ ಫೆ. 20ರಂದು ವೀರನಿಕೇತನ (ಲಿ.ವಿಶ್ವನಾಥರಡ್ಡಿ ಮುದ್ನಾಳ ಗೋದಾಮ)ದಲ್ಲಿ ಸಂಜೆ 5 ಗಂಟೆಗೆ ಕೆಜೆಪಿ ಪಕ್ಷದ ಜಿಲ್ಲಾ ಪ್ರಮುಖರ ಸಭೆ ಕರೆಯಲಾಗಿದೆ. ಸಭೆಯಲ್ಲಿ ಕೆಜೆಪಿ ಜಿಲ್ಲಾಧ್ಯಕ್ಷ ಮಲ್ಲಣಗೌಡ ಉಕ್ಕಿನಾಳ, ಮಾಜಿ ಶಾಸಕ ಡಾ. ವೀರಬಸವಂತರಡ್ಡಿ ಮುದ್ನಾಳ, ವೆಂಕಟರಡ್ಡಿ ಮುದ್ನಾಳ, ಡಾ. ಶರಣಭೂಪಾಲರಡ್ಡಿ ನಾಯ್ಕಲ್, ನಾಗರತ್ನ ಕುಪ್ಪಿ ಇತರು ಭಾಗವಹಿಸುವರು. ಸಭೆಗೆ ಪಕ್ಷದ ಪ್ರಮುಖರು ಭಾಗವಹಿಸಿ ಸಲಹೆ ಸೂಚನೆ ನೀಡಬೇಕೆಂದು ಜಿಪಂ ಮಾಜಿ ಸದಸ್ಯ ಖಂಡಪ್ಪ ದಾಸನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪರಿಚಿತ ವ್ಯಕ್ತಿ ಶವ ಪತ್ತೆ
ಗುರುಮಠಕಲ್: ಗುರುಮಠಕಲ್- ಯಾದಗಿರಿ ಮಧ್ಯೆ ಧರ್ಮಪುರ ಕ್ರಾಸ್ ಬಳಿ ಅಪರಿಚಿತ ವ್ಯಕ್ತಿಯ ಶವ ಗೋಣಿ ಚೀಲದಲ್ಲಿ ಮಂಗಳವಾರ ಪತ್ತೆಯಾಗಿದೆ. ಸುಮಾರು 30 ವರ್ಷದ ವ್ಯಕ್ತಿಯಾಗಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಗೋಣಿಚೀಲದಲ್ಲಿ ತುಂಬಿ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಎಸೆದು ಹೋಗಿರಬಹುದು ಎಂದು ಶಂಕಿಸಲಾಗಿದೆ. ಕುತ್ತಿಗೆ ಹಿಸುಕಿ ಕೊಲೆ ಮಾಡಿರಬಹುದೆಂದು ಹೇಳಲಾಗುತ್ತಿದೆ. ಎಸ್ಪಿ ವಂಶಿಕೃಷ್ಣ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

