ಆಳಂದನಲ್ಲೂ ಪ್ರತಿಭಟನೆ
ಆಳಂದ: ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದ ಕೆಲವು ನಿರ್ಧಾರಗಳನ್ನು ಖಂಡಿಸಿ ದೇಶಾದ್ಯಂತ ಬುಧವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಕರೆಗೆ ನಡೆದ ಮುಷ್ಕರಕ್ಕೆ ಬೆಂಬಲಿಸಿ ಪಟ್ಟಣದಲ್ಲೂ ಬೃಹತ್ ಪ್ರತಿಭಟನೆ ಕೈಗೊಳ್ಳಲಾಯಿತು.
ಬಸ್ ನಿಲ್ದಾಣ ಮೂಲಕ ಆರಂಭಿಸಿದ ಪ್ರತಿಭಟನೆ ಪ್ರಮುಖ ರಸ್ತೆಗಳ ಮೂಲಕ ಸಾಗಿ ತಹಸೀಲ್ದಾರ್ ಕಚೇರಿಯ ಬಳಿ ಮುಕ್ತಾಯಗೊಳಿಸಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಪುಷ್ಪಾವತಿ ಚಟ್ಟಿ, ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ರೇಖಾ ಸುತಾರ, ಪ್ರಾಂತ ರೈತ ಸಂಘದ ಕಾರ್ಯದರ್ಶಿ ಪಾಂಡರಂಗ ಮಾವಿನಕರ್, ಅಶೋಕ ಚಟ್ಟಿ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಶಶಿಕಲಾ ಪಾಟೀಲ, ನಾಗೇಂದ್ರಮ್ಮ ಗುತ್ತೇದಾರ, ಮಹಾದೇವಿ ನಿಂಬಾಳ, ಚಂದ್ರಕಲಾ ಜಿರೋಳಿ, ವಿಜಯ ತಡಕಲ, ಮಹಾದೇವಿ ಅಳಂದ ಸೇರಿದಂತೆ ನೂರಾರು ಮಹಿಳೆಯರು ಮತ್ತಿತರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
ಪ್ರಮುಖರು ಮಾತನಾಡಿ, ಚಿಲ್ಲರೆ ವ್ಯಾಪಾರದಲ್ಲಿ ವಿದೇಶಿ ನೇರ ಬಂಡವಾಳ ಕೈಬಿಡಬೇಕು. ಎಲ್ಲಾ ದಿನಗೂಲಿ ನೌಕರರಿಗೆ ಕಾಯಂಗೊಳಿಸಬೇಕು. ಕನಿಷ್ಠ ವೇತನ, ಎಲ್ಲರಿಗೂ ರೇಷನ್ ಕಾರ್ಡ್, ಅಹಾರ ಹಕ್ಕು ಅಂಗನವಾಡಿ, ಅಕ್ಷರದಾಸೋಹ, ಆಶಾ ಕಾರ್ಯಕರ್ತೆಯರು, ಗ್ರಾಪಂ ನೌಕರರಿಗೆ ಕಾಯಂಗೊಳಿಸಬೆಕು.
ನೀರಾವರಿ ತಜ್ಞಾರಾದ ಡಾ. ಜಿ.ಎಸ್. ಪರಮಶಿವಯ್ಯ ರೂಪಿಸಿರುವ ಶಶ್ವತ ನೀರಾವರಿ ಯೋಜನೆ ಜಾರಿಮಾಡಬೇಕು ಎಂಬ ಮತ್ತಿತರ ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿದರು. ಎಂದಿನಂತೆ ಸಾರ್ವಜನಿಕರ ವ್ಯವಹಾರಕ್ಕೆ ತೊಂದರೆಯಾಗದೆ ಸುಗಮವಾಗಿ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

