ಗುಲ್ಬರ್ಗಾ

ಕಾಂಗ್ರೆಸ್ ಪರ ಸ್ಪರ್ಧೆಗೆ ಅರ್ಜಿ

Published On :

ಚಿಂಚೋಳಿ: ಚಿಂಚೋಳಿ ಮೀಸಲು ವಿಧಾನಸಭಾ ಮತಕ್ಷೇತ್ರಕ್ಕೆ ಮುಂದೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಸ್ಪರ್ಧಿಸಲು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ, ಪಕ್ಷದ ಮುಖಂಡ ಶಾಮರಾವ ರಾಠೋಡ ತಿಳಿಸಿದ್ದಾರೆ.
 ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಕಾಂಗ್ರೆಸ್ ಕಾರ್ಯಕರ್ತನಾಗಿ, ಹಸರಗುಂಡಗಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಮತ್ತು ಚಿಮ್ಮನಚೋಡ ಮಂಡಲ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದೇನೆ. ಸಲಗರ ಬಸಂತಪುರ ಮತ್ತು ಚಿಮ್ಮನಚೋಡ ತಾಪಂ ಸದಸ್ಯನಾಗಿ, ತಾಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವುದರಿಂದ ಪಕ್ಷದ ಮೀಸಲು ಮತಕ್ಷೇತ್ರಕ್ಕೆ ಸ್ಪರ್ಧಿಸಲು ಟಿಕೇಟ್ ಆಕಾಂಕ್ಷಿಯಾಗಿದ್ದೇನೆ ಎಂದರು. ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್  ರಾಜ್ಯಾಧ್ಯಕ್ಷ ಜಿ. ಪರಮೇಶ್ವರ ಗೆ ಅರ್ಜಿಯನ್ನು 23ರಂದು ಸಲ್ಲಿಸಿದ್ದೇನೆ ಎಂದರು.   ಚುನಾವಣೆಯಲ್ಲಿ ಸ್ಥಳೀಯರಿಗೆ ಟಿಕೇಟ್ ನೀಡಲು ಖರ್ಗೆ ಮತ್ತು ಧರ್ಮಸಿಂಗ್ ಅವರಲ್ಲಿ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.