ಚೌಡಯ್ಯ ನಿಗಮ ಸ್ಥಾಪನೆಗೆ ಆಗ್ರಹ
ಜೇವರ್ಗಿ: ಕೋಲಿ ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ನಿಜಶರಣ ಅಂಬಿಗರ ಚೌಡಯ್ಯನವರ ಅಭಿವೃದ್ಧಿ ನಿಗಮ ಸ್ಥಾಪಿಸಿ, ನಿಗಮಕ್ಕೆ 500 ಕೋಟಿ ಅನುದಾನವನ್ನು ಪ್ರಸಕ್ತ ವರ್ಷದ ಬಜೆಟ್ನಲ್ಲಿ ಮೀಸಲಿಡಬೇಕೆಂದು ಕೋಲಿ ಸಮಾಜದ ಜಿಲ್ಲಾ ಘಟಕದ ಅದ್ಯಕ್ಷ ಪಿ.ಎನ್. ಮಾಲಿಪಾಟೀಲ್ ಆಗ್ರಹಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು, ರಾಜ್ಯ ಸರ್ಕಾರದಿಂದ ಆಚರಿಸುತ್ತಿರುವ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಗೆ ಪ್ರತಿ ತಾಲೂಕಿಗೆ 25 ಸಾವಿರ ಅನುದಾನ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ತಾಲೂಕು ಕೋಲಿ ಸಮಾಜದ ಅಧ್ಯಕ್ಷ ವಸಂತ ನರಿಬೋಳ, ಶಿವಲಿಂಗಪ್ಪ ಕಿನ್ನೂರ್, ಶಿವಶರಣಪ್ಪ ಕೋಬಾಳ, ಸಿದ್ದಣ್ಣ ರಾಜವಾಳ, ಯಲ್ಲಪ್ಪ ಮಾಸ್ತರ, ಮಲ್ಲಿಕಾರ್ಜುನ ಸಾಹು ಆಲೂರ್, ಅಮೃತ ಮಾಲಿಪಾಟೀಲ್, ಲಕ್ಷ್ಮಣ ಯಂಕಚಿ, ಅಂಬರೀಶ ಕಾಚಾಪುರ, ಪರಶುರಾಮ ಹಂಚಿನಾಳ, ಶಿವಕುಮಾರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

