ಅಕ್ರಮ ಮರಳು ಸಾಗಣೆ ತಡೆಗೆ ಆಗ್ರಹ
ಯಾದಗಿರಿ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಶಾಸಕ ಡಾ.ಎ.ಬಿ.ಮಾಲಕರಡ್ಡಿ ವಿಧಾನಸಭೆಯಲ್ಲಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಈ ಕುರಿತ ತಮ್ಮ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಖಿತ ಉತ್ತರ ನೀಡಿ, ರಾಜ್ಯದೆಲ್ಲೆಡೆ ಅಕ್ರಮ ಮರಳು ಸಾಗಣೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಮರಳು ಗಣಿಗಾರಿಕೆಗೆ ಪರವಾನಗಿಯನ್ನು ಲೋಕೋಪಯೋಗಿ ಇಲಾಖೆ ನೀಡುತ್ತಿದೆ. ಪ್ರಸ್ತುತ ನಿಯಮಗಳ ಪ್ರಕಾರ ಹೊರರಾಜ್ಯಗಳಿಗೆ ಮರಳು ಸಾಗಣೆ ನಿಷೇಧಿಸಲಾಗಿದೆ. ಆದರೆ ಕಾರವಾರ ಜಿಲ್ಲೆಗೆ ಸಂಬಂಧಿಸಿದಂತೆ ಗೋವಾ ರಾಜ್ಯಕ್ಕೆ ಮಾತ್ರ ಕಪ್ಪು ಮರಳು ಸಾಗಾಣಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಿಎಂ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಅಕ್ರಮ ಮರಳು ಸಾಗಣೆಗೆ ಸಂಬಂಧಿಸಿದಂತೆ ಗಡಿ ಜಿಲ್ಲೆಗಳಲ್ಲಿ 2648 ವಾಹನಗಳಿಗೆ 248.88 ಲಕ್ಷ ದಂಡ ವಿಧಿಸಿದ್ದು, 36 ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಅಕ್ರಮ ಮರಳು ಸಾಗಣೆ ಅವ್ಯಾಹತವಾಗಿ ನಡೆಯುತ್ತಿದ್ದರೂ ಸರ್ಕಾರ ಬಿಗಿ ಕ್ರಮಕೈಗೊಂಡಿಲ್ಲವೇಕೆ? ಎಂದು ಮಾಲಕರಡ್ಡಿ ಪ್ರಶ್ನಿಸಿದ್ದಾರೆ.
ಹೊಸಮರಳು ನೀತಿ ಕಳೆದ ಡಿಸೆಂಬರ್ನಲ್ಲಿ ಜಾರಿಗೆ ಬಂದಿದ್ದು, ಸ್ಯಾಂಡ್ ಮಾನಿಟರಿಂಗ್ ಕಮಿಟಿ ರಚಿಸಲಾಗಿದೆ. ಆಯಾ ಎಸಿಗಳು ಸಮಿತಿ ಅಧ್ಯಕ್ಷರಾಗಿದ್ದು, ಇತರೆ ಅಧಿಕಾರಿಗಳನ್ನೊಳಗೊಂಡ ಈ ಸಮಿತಿ ಅಕ್ರಮ ಮರಳು ಸಾಗಣೆ ಚಟುವಟಿಕೆ ನಿಯಂತ್ರಿಸಲಿದೆ. ಅಕ್ರಮ ಮರಳು ದಂಧೆ ತಡೆಗಟ್ಟಲು ಕಂದಾಯ, ಅರಣ್ಯ, ಸಾರಿಗೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಪೂರ್ಣ ಅಧಿಕಾರ ಒದಗಿಸಲಾಗಿದೆ ಎಂದು ಎಂದು ಸಿಎಂ ತಿಳಿಸಿದ್ದಾರೆ.
ರಾಜ್ಯದಲ್ಲಿ 1244 ಮರಳು ಬ್ಲಾಕ್ ಗುರುತಿಸಲಾಗಿದೆ. ಇದು 9845 ಎಕರೆ ಪ್ರದೇಶವಿದೆ. ಯಾದಗಿರಿ ಜಿಲ್ಲೆಯಲ್ಲಿ 2013-14ನೇ ಸಾಲಿನಲ್ಲಿ 58 ಮರಳು ಬ್ಲಾಕ್ ಗುರುತಿಸಲಾಗಿದ್ದು, ಪ್ರಸ್ತುತ ಆರು ಬ್ಲಾಕ್ಗಳಲ್ಲಿ ಅಂದರೆ 60 ಎಕರೆ ಪ್ರದೇಶದಲ್ಲಿ ಮಾತ್ರವೇ ಗಣಿಗಾರಿಕೆ ನಡೆಯುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

