ಕಾಯ್ದೆ ತಿದ್ದುಪಡಿಗೆ ಖಂಡನೆ
ಶಹಾಬಾದ್: ರಾಜ್ಯ ಸರಕಾರ 1966ರ ಎಪಿಎಂಸಿ ಕಾಯ್ದೆ ತಿದ್ದುಪಡಿ ತರುತ್ತಿರುವುದನ್ನು ವಿರೋಧಿಸಿ ನಗರದ ಅಡತ್ ವ್ಯಾಪಾರಸ್ಥರು, ದಾಲ್ ಮಿಲ್ ಮಾಲೀಕರು, ಸಿಬ್ಬಂದಿ ವರ್ಗ, ಹಮಾಲರು, ರೈತರು ಮಂಗಳವಾರ ತಮ್ಮ ವಹಿವಾಟು ಸ್ಥಗಿತಗೊಳಿಸಿ ಎಪಿಎಂಸಿ ಕಚೇರಿ ಮುಂದೆ ಧರಣಿ ನಡೆಸಿ ಮನವಿ ಸಲ್ಲಿಸಿದರು.
ನಗರದ ದಾಲ್ ಮಿಲ್ಲರ್ಸ್ ಮತ್ತು ಅಡತ್ ಅಸೋಷಿಯೇಷ್ ವತಿಯಿಂದ ಅಧ್ಯಕ್ಷ ಶಿವುಕುಮಾರ ಇಂಗಿನಶೆಟ್ಟಿ, ಉಪಾಧ್ಯಕ್ಷ ಪ್ರಶಾಂತ ಮರಗೋಳ, ಕಾರ್ಯದರ್ಶಿ ಭೀಮರಾವ್ ಮೇಟಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
1966 ರಾಜ್ಯ ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಕೃಷಿ ಕ್ಷೇತ್ರ, ರೈತರು, ವ್ಯಾಪಾರಸ್ಥರು, ಸಿಬ್ಬಂದಿ, ಹಮಾಲರು ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಈ ತಿದ್ದುಪಡಿಯಿಂದ ರೈತರಿಗೆ, ವ್ಯಾಪಾರಸ್ಥರಿಗೆ ಗ್ರಾಹಕರ ಹಿತಾಸಕ್ತಿಗೆ ವಿರೋಧವಾಗಿದೆ. ಇದರಿಂದ ವ್ಯಾಪಾರಸ್ಥರು, ಸಿಬ್ಬಂದಿ, ಹಮಾಲರು ಅವರ ಮೇಲೆ ಅವಲಂಬಿಸಿರುವ ಕುಟುಂಬದವರು, ಬಂಡಿ, ತಳ್ಳುಗಾಡಿ ಕಾರ್ಮಿಕರು, ಕುಟುಂಬದವರು ನಿರುದ್ಯೋಗಿಗಳಾಗಬೇಕಾಗುತ್ತದೆ. ಸರಕಾರ ಕೂಡಲೇ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಹಿಂದಕ್ಕೆ ಪಡೆಯಬೇಕು. ಅಥವಾ ಅವಲಿಂಬಿತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಎಪಿಎಂಸಿ ಕಾರ್ಯದರ್ಶಿ ಶಿವಶಂಕರ ನನ್ನಾ ಅವರಿಗೆ ಮನವಿ ಸಲ್ಲಿಸಿದರು.ಅಡತ್ ವ್ಯಾಪಾರಸ್ಥರಾದ ಶರಣಬಸಪ್ಪ ಕೋಬಾಳ, ಸಂತೋಷಕುಮಾರ ಇಂಗಿನಶೆಟ್ಟಿ, ಶರಣಬಸಪ್ಪ ಬಿರಾಳ, ಭೀಮರಾವ್ ಅಸ್ಪಲಿ, ಅಣ್ಣಪ್ಪ ದಸ್ತಾಪುರ, ಭೀಮಣ್ಣ ಖಂಡ್ರೆ ಅಸ್ಪಲಿ, ಅಣವೀರ ಇಂಗಿನಶೆಟ್ಟಿ, ನಾಗಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

