ಕಾಮಗಾರಿ ಪೂರ್ಣಕ್ಕೆ ಅ.10 ಗಡುವು
ಕನ್ನಡಪ್ರಭ ವಾರ್ತೆ ಯಾದಗಿರಿ ಜು.10
ಅ.10ರೊಳಗೆ ಸೈದಾಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎ. ಜಿಲಾನಿ ಆದೇಶಿಸಿದ್ದಾರೆ.
ಗುರುವಾರ ಇಲ್ಲಿನ ಜಿ.ಪಂ. ಸಭಾಂಗಣದಲ್ಲಿ ಸೈದಾಪುರ ಹೋಬಳಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀರು ಸರಬರಾಜಿಗೆ ನಿಖರ ವರದಿ ನೀಡಬೇಕು ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಜು.25 ರ ಒಳಗೆ ಸೈದಾಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಕುಡಿಯುವ ನೀರು ತಲುಪಬೇಕು. ಇನ್ನುಳಿದ ಗ್ರಾಮಗಳಲ್ಲಿನ ಇತರ ಕಾಮಗಾರಿಗಳನ್ನು ಅ.10ರೊಳಗೆ ಪೂರ್ಣಗೊಳಿಸಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಒಂದು ತೊಟ್ಟು ನೀರು ಹರಿಸಿಲ್ಲ: ಆನೂರು(ಕೆ) ಗ್ರಾಮದಿಂದ ಸೈದಾಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಬಹುಗ್ರಾಮ ಯೋಜನೆಯಡಿ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದರು.
ಸೈದಾಪುರ ಕ್ಷೇತ್ರದ ಜನರು ಬಹುಗ್ರಾಮ ಯೋಜನೆಯಡಿ ಒಂದು ಹನಿ ನೀರು ಕುಡಿದಿದ್ದರೆ ನಾನು ನನ್ನ ಸ್ಥಾನಕ್ಕೆ ರಾಜಿನಾಮೆ ಕೊಡುತ್ತೇನೆ. ಅಧಿಕಾರಿಗಳು ಸಭೆಯಲ್ಲಿ ಸುಳ್ಳು ಮಾಹಿತಿ ನೀಡಬಾರದು. ಇಲ್ಲಿ ಗ್ರಾಮಸ್ಥರ ಮಾತು ನಂಬಬೇಕು ಅಥವಾ ಅಧಿಕಾರಿಗಳ ಮಾತು ನಂಬಬೇಕೋ ಎಂದು ಖಾರವಾಗಿ ಪ್ರಶ್ನಿಸಿದರು.
ಪೈಪ್ ಒಡೆದಿದೆಯಂತೆ!: ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಪಂಚಾಯತ್ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿ, ನೀರು ಸರಬರಾಜು ಮಾಡುವ ಪೈಪ್ಗಳು ಒಡೆದ ಕಾರಣ ಸಮರ್ಪಕವಾಗಿ ನೀರು ತಲುಪುತ್ತಿಲ್ಲ. ಈ ಬಗ್ಗೆ ಕ್ರಮಕ್ಕೆ ಮುಂದಾಗುತ್ತೇವೆ ಎಂದರು.
ಹಾರಿಕೆಯ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸೈದಾಪುರ ಗ್ರಾ.ಪಂ ಅಧ್ಯಕ್ಷೆ ರಾಧಮ್ಮ ಕೋರೆ ಸುಳ್ಳು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಪಶು ಆಸ್ಪತ್ರೆಯ ಸ್ಥಳಾಂತರವಾಗಿಲ್ಲ: ಸೈದಾಪುರದಲ್ಲಿ ಪಶು ಆಸ್ಪತ್ರೆ ಸ್ಥಳಾಂತರಕ್ಕೆ ಈ ಹಿಂದೆಯೇ ಸೂಚಿಸಲಾಗಿದ್ದರೂ ವಿಳಂಬ ಮಾಡುತ್ತಿರುವುದೇಕೆ? ಎಂದು ಪಶು ಇಲಾಖೆಯ ಅಧಿಕಾರಿಗಳಿಗೆ ಪ್ರಶ್ನಿಸಿದ ದೋಖಾ, ಗ್ರಾಮದಲ್ಲಿ ಸರ್ಕಾರಿ ಜಮೀನು ಸಾಕಷ್ಟಿದೆ. ಆದರೂ ಅಧಿಕಾರಿಗಳು ಈ ಬಗ್ಗೆ ಗಮನ ನೀಡುತ್ತಿಲ್ಲ. ಕೂಡಲೇ ಹೋಬಳಿಯಲ್ಲಿನ ಸಮಸ್ಯೆಗಳ ಬಗ್ಗೆ ಅಧಿಕಾರಿ ವರ್ಗ ಕ್ರಮಕ್ಕೆ ಮುಂದಾಗಬೇಕಿದೆ ಎಂದು ತಿಳಿಸಿದರು.
ಸಭೆಯಲ್ಲಿ ತಾ.ಪಂ ಸದಸ್ಯ ಹಂಪನಗೌಡ ಬೆಳಗುಂದಿ, ಶ್ಯಾಮಲಾ ವಾರದ ಸೇರಿ ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

