ಗುಲ್ಬರ್ಗಾ

ಪ್ರೌಢಶಾಲೆ ದುಸ್ಥಿತಿ ಕಂಡು ದಂಗಾದ ಬಿಇಒ

Published On :

ಕೆಂಭಾವಿ: ಪಟ್ಟಣದ ಸರ್ಕಾರಿ ಉರ್ದು ಪ್ರೌಢ ಶಾಲೆಯ ಪಕ್ಕದಲ್ಲಿ ತಿಪ್ಪೆಗುಂಡಿ ಹಾಕಿದ್ದನ್ನು ಇತ್ತೀಚೆಗೆ ಪತ್ರಿಕೆ ವರದಿ ಮಾಡಿದ್ದ ಹಿನ್ನೆಲೆಯಲ್ಲಿ ಶುಕ್ರವಾರ ಶಾಲೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎ. ವಿ. ಕೆಂಪರಂಗಯ್ಯ ಶಾಲೆಯ ದುಸ್ಥಿತಿ ಕಂಡು ದಂಗಾದರು.
ಶಾಲೆಯಲ್ಲಿರುವ ಶೌಚಾಲಯ, ಕುಡಿವ ನೀರಿನ ವ್ಯವಸ್ಥೆ, ತರಗತಿ ಕೋಣೆ ಸೇರಿ ಹಲವು ವಿಭಾಗಗಳಿಗೆ ಭೇಟಿ ನೀಡಿ ಅಲ್ಲಿರುವ ಅವ್ಯವಸ್ಥೆ ಕಂಡು ಮುಖ್ಯಗುರುಗಳ ಮೇಲೆ ಹರಿಹಾಯ್ದರು. ಸರ್ಕಾರದ ಅನುದಾನವನ್ನು ಸಮರ್ಪಕ ಬಳಕೆ ಮಾಡಿ ವಿದ್ಯಾರ್ಥಿಗಳಿಗೆ ಕನಿಷ್ಠ ಸೌಲಭ್ಯಗಳನ್ನು ಒದಗಿಸುವುದು ಶಿಕ್ಷಕರ ಕರ್ತವ್ಯ. ಆದರೆ ಈ ಶಾಲೆಯಲ್ಲಿ ಅಂತಹ ಅವಾವುವೂ ಕಾಣುತ್ತಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿದರು. ವಾರದಲ್ಲಿ ಕಿಟಿಕಿ ಪಕ್ಕ ಹಾಕಿದ ತಿಪ್ಪೆಗುಂಡಿ ತೆರವುಗೊಳಿಸಬೇಕು.
ಶೌಚಾಲಯ ಸರಿಪಡಿಸಬೇಕು. ಕುಡಿಯುವ ನೀರಿನ ತೊಟ್ಟಿ ಸ್ವಚ್ಛಗೊಳಿಸಬೇಕು. ಇಲ್ಲವಾದರೆ ಇದರ ಬಗ್ಗೆ ಉಪ ನಿರ್ದೇಶಕರಿಗೆ ಪತ್ರ ಬರೆದು ಶಿಸ್ತು ಕ್ರಮಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದರು.
ತಾವು ಶಾಲೆಗೆ ಭೇಟಿ ನೀಡುವುದಾಗಿ ಮಾಹಿತಿ ಇದ್ದರೂ ಗೈರು ಹಾಜರಾದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಮುಖ್ಯಗುರುಗಳಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ದುಸ್ಥಿತಿ ಬಗ್ಗೆ ಮಷಾಕಸಾಬ ಸಾಸನೂರ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.