ರೇವನೂರ ಶಾಲೆಗೆ ಶಾಸಕ ಅಜಯಸಿಂಗ್ ಭೇಟಿ
ಜೇವರ್ಗಿ: ತಾಲೂಕಿನ ರೇವನೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಇತ್ತೀಚೆಗೆ ಕ್ಷೇತ್ರದ ಶಾಸಕ ಡಾ. ಅಜಯಸಿಂಗ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಶಾಲೆಯಲ್ಲಿ ಕಳೆದ 15 ದಿನಗಳಿಂದ ಬಿಸಿಯೂಟ ಸ್ಥಗಿತಗೊಂಡಿದೆ ಎಂಬ ಮಾಹಿತಿ ಪಡೆದ ಶಾಸಕರು, ರೇವನೂರ ಶಾಲೆಗೆ ಭೇಟಿ ನೀಡಿ ವಿಚಾರಿಸಿದಾಗ ಅಡುಗೆ ಅನಿಲದ ಕೊರತೆಯಿದೆ ಎಂದು ಶಿಕ್ಷಕರು ತಿಳಿಸಿದರು.
ಯಾವುದೇ ಕಾರಣಕ್ಕೂ ಅಕ್ಷರ ದಾಸೋಹ ಯೋಜನೆ ನಿಲ್ಲಿಸದಂತೆ ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಕಟ್ಟುನಿಟ್ಟಾಗಿ ಸೂಚಿಸಿದರು. ಶಾಸಕರು ಶಾಲೆಯಲ್ಲಿರುವ ಮಕ್ಕಳ ದಾಖಾಲಾತಿ, ಹಾಜರಾತಿ ಹಾಗೂ ಶಿಕ್ಷಣದ ಗುಣಮಟ್ಟ ಕುರಿತು ದಾಖಲಾತಿ ಪರಿಶೀಲಿಸಿದರು. ಶಾಲೆಯ ಪ್ರತಿಯೊಂದು ತರಗತಿಗೆ ತೆರಳಿ ಮಕ್ಕಳಿಂದ ಶೈಕ್ಷಣಿಕ ಸಮಸ್ಯೆಗಳನ್ನು ಆಲಿಸಿದರು.
ನಂತರ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದರು. ಗ್ರಾಮದಲ್ಲಿನ ಮೂರು ಅಂಗನವಾಡಿ ಕೇಂದ್ರಗಳಿಗೆ ಬೀಗ ಹಾಕಲಾಗಿತ್ತು. ಇದರಿಂದ ಸಿಡಿಮಿಡಿಗೊಂಡ ಶಾಸಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿ ತರಾಟೆಗೆ ತೆಗೆದುಕೊಂಡರು. ಸಿದ್ರಾಮಪ್ಪ ಗೌಡ ಹರನೂರ, ನಿಂಗಣ್ಣ ನೇರಡಗಿ, ಶಂಕರಲಿಂಗ ಹನ್ನೂರ, ಮಲ್ಲಿಕಾರ್ಜುನ ಹನ್ನೂರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

