ಗುಲ್ಬರ್ಗಾ

ಆರೋಪಿಗಳ ಬಂಧಿಸಲು ಆಗ್ರಹ

Published On :

ಗುಲ್ಬರ್ಗ: ಬೆಂಗಳೂರಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಎಐ ಎಂಎಸ್‌ಎಸ್ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಯಾವುದೇ ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಶಿಕ್ಷೆಗೆ ಒಳಪಡಿಸಬೇಕೆಂದು ಜಿಲ್ಲಾಧ್ಯಕ್ಷೆ ಡಾ. ಸೀಮಾ ದೇಶಪಾಂಡೆ ಒತ್ತಾಯಿಸಿದ್ದಾರೆ.
ಮಹಿಳೆಯರ ಮೇಲಿನ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಸಮರ್ಪಕವಾಗಿ ನ್ಯಾಯಾಂಗ, ಪೊಲೀಸ್ ವ್ಯವಸ್ಥೆಯು ಸೇರಿದಂತೆ ತನ್ನೆಲ್ಲಾ ಅಂಗಗಳನ್ನು ಸಜ್ಜುಗೊಳಿಸುವಲ್ಲಿ ಸರ್ಕಾರಗಳು ರಾಜಕೀಯ ಇಚ್ಛಾಶಕ್ತಿ ತೋರದಿರುವುದು ಮಹಿಳೆಯರ ಮೇಲಿನ ಅಪರಾಧಗಳ ಹೆಚ್ಚಳಕ್ಕೆ ಇನ್ನೊಂದು ಪ್ರಮುಖ ಕಾರಣವಾಗಿದೆ.
ಅಲ್ಲದೆ ಸಾಮಾಜಿಕ ಪ್ರಜಾತಾಂತ್ರೀಕರಣ ಕಾರ್ಯವನ್ನು ಕೈಗೊಳ್ಳಬೇಕಾಗಿದೆ. ಮಹಿಳೆಯ ಬಗೆಗಿನ ಬೇರೂರಿದ ಪುರುಷ ಪ್ರಾಬಲ್ಯ ಧೋರಣೆಗಳನ್ನು ಕಿತ್ತೆಸೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರವು ಕಾರ್ಯೋನ್ಮುಖವಾಗಬೇಕು. ನ್ಯಾ. ವರ್ಮಾ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸಿ ಮಹಿಳೆಯರಿಗೆ ಭದ್ರತೆ, ರಕ್ಷಣೆಯನ್ನು ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.