ಗುಲ್ಬರ್ಗಾ

ಮೊರಾರ್ಜಿ ಶಾಲೆಯ 41 ಮಕ್ಕಳು ಅಸ್ವಸ್ಥ

Published On :

ಆಳಂದ; ತಾಲೂಕಿನ ಬೆಳಮಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮೂಲ ಸೌಲಭ್ಯಗಳು ಒದಗಿಸಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸುಮಾರು 41 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ 8.30ರ ಸುಮಾರಿಗೆ ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು ಮಧ್ಯಾಹ್ನ 1 ಗಂಟೆಯಾದರು ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಸ್ಪಂದಿಸಿಲ್ಲ ಎಂದು ಆರೋಪಿಸಲಾಗಿದೆ.  ಈ ಮಧ್ಯ ಸುಮಾರು 41 ವಿದ್ಯಾರ್ಥಿಗಳು ಅಸ್ವಸ್ಥರಾದಾಗ ಹತ್ತಿರದ ವಿ.ಕೆ. ಸಲಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ ಮೇಲೆ ಚೇತರಿಸಿಕೊಂಡಿದ್ದಾರೆ. ನಂತರ ವಿದ್ಯಾರ್ಥಿಗಳನ್ನು ಶಾಲೆಗೆ ಕರೆ ತರಲಾಗಿದೆ ಎಂದು ಶಾಲಾ ಮೂಲಗಳು ಹೇಳಿವೆ. ಘಟನಾ ಸ್ಥಳಕ್ಕೆ ತಾಲೂಕು ಆರೋಗ್ಯಾಧಿಕಾರಿಗಳು, ನರೋಣಾ ಠಾಣೆ ಅಧಿಕಾರಿಗಳು ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ.ಪಿ. ರಾಠೋಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಊಟ ಹಸಿಬಿಸಿಯಾಗಿ ಬೇಯಿಸಿ ನೀಡುತ್ತಾರೆ ಎಂದು ಪ್ರತಿಭಟನಾ ವಿದ್ಯಾರ್ಥಿಗಳು ಆರೋಪಿಸಿದರು. ಕಲ್ಯಾಣ ಇಲಾಖೆ ಅಧಿಕಾರಿಗಳು ಮುಂದೆ ಹೀಗಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.