ಮಕ್ಕಳ ಭವಿಷ್ಯ ಹಾಳು ಮಾಡಬೇಡಿ
ಚಿತ್ತಾಪುರ: ತಾಲೂಕಿನ ಹಾಸ್ಟೆಲ್ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿ ಎರಡು ತಿಂಗಳಾದರೂ ಆಯ್ಕೆ ಪಟ್ಟಿ ಪ್ರಕಟಿಸಿಲ್ಲ. ವಿದ್ಯಾರ್ಥಿಗಳು ಶಾಲೆಗೆ ಹೋಗಬೇಕೇ, ಬೇಡವೇ ಎಂಬ ಗೊಂದಲದಲ್ಲಿದ್ದಾರೆಂದು ಸಮಾಜ ಕಾರ್ಯಕರ್ತ ಮರಿಯಪ್ಪ ಬಾಯಿನ್ ತಿಳಿಸಿದ್ದಾರೆ. ಶಾಲೆಗಳು ಪ್ರಾರಂಭವಾಗಿ ಮೊದಲ ಸೆಮಿಸ್ಟರ್ ಮುಗಿಯುತ್ತಾ ಬಂದರೂ ಹಾಸ್ಟೆಲ್ ಆಯ್ಕೆ ಪಟ್ಟಿ ಪ್ರಕಟಿಸಿಲ್ಲ. ವಸತಿ ಸೌಕರ್ಯವಿಲ್ಲದೆ ಶಾಲೆಗೆ ಹೋಗಲಾಗುತ್ತಿಲ್ಲ. ಶಾಲೆಗಳಲ್ಲಿ ನಿತ್ಯ ಕಡ್ಡಾಯವಾಗಿ ಬರಬೇಕೆಂದು ತಿಳುಸುತ್ತಾರೆ. ಆದರೆ ಹಾಸ್ಟೆಲ್ ಸೌಕರ್ಯವಿಲ್ಲದ ಕಾರಣ ತರಗತಿಗಳಿಗೆ ಹಾಜರಾಗಲಾಗುತ್ತಿಲ್ಲ ಎಂದರು. ಈ ಬಗ್ಗೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಅವರು, ಅಯ್ಕೆ ಪ್ರಕ್ರಿಯೆಗೆ ಶಾಸಕರು ಅಧ್ಯಕ್ಷರಾಗಿದ್ದು ಒಪ್ಪಿಗೆ ನೀಡಿದ ನಂತರ ಪಟ್ಟಿ ಪ್ರಕಟಿಸುತ್ತೇವೆಂದು ಹೇಳುತ್ತಾರೆ. ಇದರಿಂದ ಶಾಸಕರು ಹಾಗೂ ಅಧಿಕಾರಿಗಳ ವಿಳಂಬ ನೀತಿಯಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಆಪಾದಿಸಿದರು. ಶಾಸಕ ಪ್ರಿಯಾಂಕ್ ಖರ್ಗೆಯವರು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಆಯ್ಕೆ ಪಟ್ಟಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ಮರಿಯಪ್ಪ ಬಾಯಿನ್ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

