ಜಿಲ್ಲಾದ್ಯಂತ ಪಲ್ಸ್ ಪೋಲಿಯೋ ಶೇ. 92
ಹಾಸನ: ಜಿಲ್ಲಾದ್ಯಂತ ಭಾನುವಾರ ಎರಡನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ 5 ವರ್ಷದೊಳಗಿನ ಸಾವಿರಾರು ಮಕ್ಕಳಿಗೆ ಲಸಿಕೆ ಹಾಕಲಾಯಿತು. ನಗರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ ಚಾಲನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಸನ ವೈದ್ಯಕೀಯ ಮಹಾವಿದ್ಯಾಲಯ, ಚಾಮರಾಜೇಂದ್ರ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸಾರಿಗೆ ಬಸ್ ನಿಲ್ದಾಣ, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆನೇಕ ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಲಾಯಿತು.
ಆಸ್ಪತ್ರೆಗೆ ಬಂದು ಪಲ್ಸ್ ಪೋಲಿಯೋ ಲಸಿಕೆ ಹಾಕಿಸಲು ಸಾಧ್ಯವಾಗದಂತಹ ಅಲೆಮಾರಿ ಜನಾಂಗ ಎಲ್ಲೆಲ್ಲಿ ಇದ್ದಾರೋ ಅವರನ್ನು ಗುರುತಿಸಿ ಲಸಿಕೆ ಹಾಕಲು 9 ಮೊಬೈಲ್ ಕಿಟ್ ಮಾಡಲಾಗಿದೆ. ತಾಲೂಕಿನಲ್ಲಿ ಗ್ರಾಮೀಣ ಪ್ರದೇಶದ 22,926 ಮಕ್ಕಳು, 118 ಬೂತ್ ಹಾಗೂ ನಗರ ಪ್ರದೇಶದಲ್ಲಿ 63 ಬೂತ್ಗಳನ್ನು ನಿರ್ಮಿಸಿದ್ದು, 16,506 ಮಕ್ಕಳು ಸೇರಿದಂತೆ ಒಟ್ಟು 39,432 ಮಕ್ಕಳಿದ್ದಾರೆ. 181 ಲಸಿಕಾ ಕೇಂದ್ರ ತೆರೆಯಲಾಗಿದೆ. 175 ಮೇಲ್ವಿಚಾರಕರು, ಆರೋಗ್ಯ ಇಲಾಖೆ ಸಿಬ್ಬಂದಿ ಅಂಗನವಾಡಿ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು ಸೇರಿದಂತೆ 3536 ಮಂದಿ ಲಸಿಕಾ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸಿದರು.
ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ ಮಾತನಾಡಿ, ಜಿಲ್ಲೆಯಲ್ಲಿ 17,76,221 ಜನಸಂಖ್ಯೆ ಇದ್ದು, 5 ವರ್ಷ ಒಳಪಟ್ಟ ಸುಮಾರು 1,87,072 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುತ್ತಿದ್ದು, ಜಿಲ್ಲೆಯ್ಯಾದಂತ ಒಟ್ಟು 872 ಲಸಿಕೆಯ ಬೂತ್ಗಳನ್ನು ಇರಿಸಲಾಗಿದೆ ಹಾಗೂ 3,536 ನರ್ಸ್, ಆಶಾ ಕಾರ್ಯಕರ್ತರನ್ನು ಈ ಕರ್ತವ್ಯಕ್ಕೆ ಬಳಸಿಕೊಂಡು ಮನೆ ಮನೆಗೆ ತೆರಳಿ ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸ್ವಯಂ ಸೇವಾ ಸಂಸ್ಥೆಗಳು ಸಹಕಾರ: ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಆರೋಗ್ಯ ಸಹಾಯಕಿಯರು ಸೇರಿದಂತೆ ಒಟ್ಟು 3536 ಮಂದಿಯನ್ನು ಬಳಸಿಕೊಳ್ಳಲಾಗುತ್ತಿದೆ. 175 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಕಾರ್ಯಕ್ರಮದ ಯಶಸ್ವಿಗೆ ಸ್ವಯಂ ಸೇವಾ ಸಂಸ್ಥೆಗಳು ಸಹಕಾರ ನೀಡುತ್ತಿವೆ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೋಪಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಶ್ಯಾಮಲಾದೇವಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಂಕರ್, ನಗರಸಭೆ ಆಯುಕ್ತ ನಾಗಭೂಷಣ್, ಎಂ.ಕೃಷ್ಣ ಆಸ್ಪತ್ರೆಯ ಸತೀಶ್, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ.ಶಿವಣ್ಣ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

