'ಎನ್‌ಎಸ್‌ಎಸ್‌ನಿಂದ ಜನರಲ್ಲಿ ಅರಿವು ಮೂಡಿಸಲು ಸಾಧ್ಯ'
ಹಾಸನ: ರಾಷ್ಟ್ರೀಯ ಸೇವಾ ಯೋಜನೆಯಿಂದ ಗ್ರಾಮೀಣ ಭಾಗದ ಜನರಲ್ಲಿ ಅರಿವು ಮೂಡಿಸಲು ಸಾಧ್ಯ ಎಂದು ಕುದುರುಗುಂಡಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಕೆ. ಶಿವಶಂಕರ್ ಹೇಳಿದರು.
ತಾಲೂಕಿನ ಕುದುರುಗುಂಡಿ ಗ್ರಾಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಹಾಸನದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಎನ್‌ಎಸ್‌ಎಸ್ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಹಳ್ಳಿಗಳು ಹಿಂದುಳಿದ್ದು, ಜನರಲ್ಲಿ ಅರಿವು ಮೂಡಿಸಬೇಕಾದ ಅವಶ್ಯಕತೆ ಇರುವುದರಿಂದ ರಾಷ್ಟ್ರೀಯ ಸೇವಾ ಯೋಜನೆ ಮೂಲಕ ವಿದ್ಯಾರ್ಥಿಗಳ ಸರ್ಕಾರಿ ಸೌಲಭ್ಯ, ಗ್ರಾಮಗಳ ಸ್ವಚ್ಛತೆ ಸೇರಿದಂತೆ ಜನರಲ್ಲಿ ಸಾಮಾಜಿಕ ಜಾಗೃತಿ ಮೂಡಿಸಬೇಕು ಎಂದು ನುಡಿದರು.
ಮುಖ್ಯ ಅತಿಥಿ ಕುದುರುಗುಂಡಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಚಂದ್ರಶೆಟ್ಟಿ ಮಾತನಾಡಿ ಗ್ರಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅತೀ ಹೆಚ್ಚು ಕಾಳಜಿ ಹೊಂದಿದ್ದರೆ ಗ್ರಾಮಗಳ ಅಭಿವಣದ್ಧಿಗೊಳ್ಳಲು ಸಹಕಾರಿಯಾಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಕೃಷ್ಣಪ್ಪ ವಿದ್ಯಾರ್ಥಿಗಳು ಸಮಾಜಕ್ಕೆ ನಿಸ್ವಾರ್ಥತೆಯಿಂದ ಸೇವೆ ಮಾಡಬೇಕಾದ ಅವಶ್ಯಕತೆ ಇದ್ದು, ಈ ನಟ್ಟಿನಲ್ಲಿ ಎಲ್ಲಾ ಕಾಲೇಜಿನಲ್ಲಿ ರಾಷ್ಟ್ರಿಯ ಸೇವಾ ಯೋಜನೆಯನ್ನು ಬಲಗೊಳಿಸಬೇಕಾದ ಅವಶ್ಯಕತೆ ಇದೆ. ವಿದ್ಯಾರ್ಥಿಗಳು ಎನ್.ಎಸ್.ಎಸ್‌ನಲ್ಲಿ ತೊಡಗುವುದರಿಂದ ಆತ್ಮಸ್ಥೈರ್ಯ ಮೈಗೂಡಿಸಿಕೊಂಡು ಸಮಾಜದಲ್ಲಿ ಒಬ್ಬ ಉತ್ತಮ ನಾಯಕನಾಗಿ ಬೆಳೆಯಲು ಸಹಾಯಕವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶಿಬಿರಾಧಿಕಾರಿ ಎಂ.ಕೆ. ಮಹೇಶ್, ಪ್ರೊ. ಸಿ.ಎಸ್. ಮೋಹನ್‌ಕುಮಾರ್, ಪಾರ್ಥೇಶ್, ಪುಟ್ಟರಾಜಪ್ಪ, ಎಂ.ಎ. ಪ್ರಕಾಶ್ ಮಹಿಳಾ ಕಾಲೇಜಿನ ಪ್ರಾಧ್ಯಾಪಕ ಪ್ರೊ.ನಿರ್ವಾಣೀಗೌಡ, ಪ್ರೊ. ಕೆ. ಗುರುರಾಜ್, ಪ್ರೊ. ಮೋಹನ್‌ಕುಮಾರ್, ಡಾ. ಯಶೋದ, ಡಾ. ಕೆ.ಜಿ. ಕವಿತಾ, ಎ.ವಿ.ಕೆ. ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪ್ರೊ. ಎಚ್.ಎಲ್. ಮಲ್ಲೇಶ್‌ಗೌಡ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

