ಹಾಲು ಉತ್ಪಾದಕರ ಸಂಘಗಳಿಂದ ರೈತರ ಅಭಿವೃದ್ಧಿ : ಪಟೇಲ್ ಶಿವರಾಂ
ಬೇಲೂರು: ರೈತರಿಗೆ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ದೊರಯುತ್ತಿರುವ ಸೌಲಭ್ಯಗಳನ್ನು ಪ್ರಾಮಾಣಿಕತೆಯಿಂದ ರೈತರಿಗೆ ದೊರೆಯುವಂತೆ ಮಾಡಬೇಕು. ಆಗ ರೈತರ ಅಭಿವೃದ್ಧಿ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ, ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಪಟೇಲ್ ಶಿವರಾಂ ಅಭಿಪ್ರಾಯಪಟ್ಟರು.
ರಾಜ್ಯ ಸಹಕಾರ ಮಹಾಮಂಡಳ ನಿ., ಹಾಸನ ಜಿಲ್ಲಾ ಸಹಕಾರ ಯೂನಿಯನ್, ಹಾಸನ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ಹಾಗೂ ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಸಹಕಾರ ಭವನದಲ್ಲಿ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಏಪಎಡಿಸಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ದಿನ 6 ಲಕ್ಷ ಲೀಟರ್ ಇದ್ದ ಹಾಲಿನ ಉತ್ಪಾದನೆ ಪ್ರಸ್ತುತ 3 ಲಕ್ಷ ಲೀಟರ್‌ಗೆ ಇಳಿದಿದೆ. ಪಶುಗಳಿಗೆ ಹಾಗೂ ಜನರಿಗೆ ಕುಡಿಯಲು ನೀರು ಸಿಗದಂತಹ ಪರಿಸ್ಥಿತಿ ಉಂಟಾಗುತ್ತಿದೆ. ಕಾರ್ಯದರ್ಶಿಗಳು ಅತೀ ಜಾಗೂರೂಕತೆಯಿಂದ ಕೆಲಸ ನಿರ್ವಹಿಸಬೇಕಾಗಿದೆ. ಹಾಲಿನ ಉತ್ಪಾದನೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು: ಹಾಲು ಉತ್ಪಾದಕರ ಸಹಕಾರ ಸಂಘಗಳ ಅಭಿವೃದ್ಧಿಗೆ ಆಡಳಿತ ಮಂಡಳಿ ಮತ್ತು ಸಿಬ್ಬಂದಿವರ್ಗದವರ ಪಾತ್ರ ಅತೀ ಮುಖ್ಯ. ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು ಎಂದರು.
ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಆರ್.ಟಿ. ದ್ಯಾವೇಗೌಡ ಮುಖ್ಯ ಅತಿಥಿ ಬಿ.ಡಿ.ಚಂದ್ರೇಗೌಡ ಮಾತನಾಡಿದರು.
ಶುದ್ಧ ಹಾಲು ಸಂಗ್ರಹಣೆ ಮಹತ್ವ: ತರಬೇತಿ ಕಾರ್ಯಕ್ರಮದಲ್ಲಿ ಶುದ್ಧ ಹಾಲು ಸಂಗ್ರಹಣೆ ಮಹತ್ವ ಕುರಿತಂತೆ ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕ ಬಿ.ಪಿ. ರಂಗನಾಥ್, ಕಾರ್ಯದರ್ಶಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳು ಕುರಿತಂತೆ ಹಾಲು ಒಕ್ಕೂಟ ಉಪವ್ಯವಸ್ಥಾಪಕ ಜೈಪ್ರಕಾಶ್, ಸಹಕಾರ ಕಾಯಿದೆಯ ಮುಖ್ಯಾಂಶಗಳು ಹಾಗೂ ಯಶಸ್ವಿನಿ ಯೋಜನೆ ಕುರಿತಂತೆ ಉಪನಿಬಂಧಕ ಸಿ.ರಾಜಣ್ಣರೆಡ್ಡಿ ಉಪನ್ಯಾಸ ನೀಡಿದರು. ಬೇಲೂರು ತಾಲೂಕಿನ ಸಹಕಾರ ಅಭಿವೃದ್ಧಿ ಅಧಿಕಾರಿ ದೇವರಾಜು, ನಿರ್ದೇಶಕ ಬಿ.ಡಿ. ಚಂದ್ರೇಗೌಡ, ಬಿ.ಸಿ. ವೀರೇಶ್, ಎಚ್.ಬಿ. ಮಲ್ಲಪ್ಪ, ರಾಮಣ್ಣ, ವನಿತಾ, ಪುಟ್ಟರಾಮು ಹಾಗೂ ಬೇಲೂರು ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳು ಭಾಗವಹಿಸಿದ್ದರು.
ವಾಣಿ ಪ್ರಾರ್ಥಿಸಿದರು. ಯೂನಿಯನ್ ಉಪಾಧ್ಯಕ್ಷ ದೊಡ್ಡಬೀಕನಹಳ್ಳಿ ನಾಗರಾಜು ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

