ಹಾಸನ

'ಭ್ರಷ್ಟಾಚಾರ ಬೇರು ಸಮೇತ ಕಿತ್ತೊಗೆಯಿರಿ'

Published On :

ಅರಸೀಕೆರೆ: ದೇಶದ ರಾಜಕಾರಣದಲ್ಲಿ ಭ್ರಷ್ಟಾಚಾರ ಬಹುದೊಡ್ಡ ಪಿಡುಗಾಗಿದ್ದು ಇದನ್ನು ಬೇರುಸಮೇತ ಕಿತ್ತು ಹಾಕಬೇಕು. ಇಲ್ಲದಿದ್ದರೆ ದೇಶ ಪ್ರಗತಿಪಥದತ್ತ ಮುನ್ನಡೆಯಲು ಸಾಧ್ಯವಿಲ್ಲ ಎಂದು ಸ್ವಾತಂತ್ರ್ಯ ಹೋರಾಟಗಾರ ಡಾ.ಎಚ್.ಎಸ್.ದೊರೆಸ್ವಾಮಿ ಆತಂಕ ವ್ಯಕ್ತಪಡಿಸಿದರು.
ಕಸ್ತೂರ ಬಾ ಟ್ರಸ್ಟ್ ಆವರಣದಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಮೈಸೂರು ವಿಶ್ವವಿದ್ಯಾನಿಲಯ, ಗಾಂಧೀ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ಮದ್ಯಪಾನ ಸಂಯಮ ಮಂಡಳಿ, ಅರಸೀಕೆರೆ ಹಾಗೂ ಬಾಣಾವರ ಸರ್ಕಾರಿ ಪ್ರಥಮ ದರ್ಜೆ  ಕಾಲೇಜುಗಳ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಉಪನ್ಯಾಸ ನೀಡಿದರು.
ಭ್ರಷ್ಟಾಚಾರದಿಂದಾಗಿ ವಿಶ್ವದಲ್ಲಿ ದೇಶದ ಮಾನ ಹರಾಜಾಗ ತೊಡಗಿದೆ. ದೇಶ ವಿದೇಶಗಳಲ್ಲಿ ಇಲ್ಲಿನ ಭ್ರಷ್ಟಾಚಾರದ ಬಗ್ಗೆ ಪ್ರತಿಯೊಬ್ಬರೂ ಮಾತನಾಡುವಂತಾಗಿದೆ. ಇದು ಭಾರತೀಯರಿಗೆ ಅಪಮಾನವಲ್ಲದೇ ಬೇರೇನೂ ಅಲ್ಲ. ಭ್ರಷ್ಟಾಚಾರ ಮುಕ್ತ ರಾಷ್ಟ್ರ ನಿರ್ಮಾಣದಲ್ಲಿ ಯುವಜನಾಂಗ ಮಹತ್ವದ ಪಾತ್ರ ವಹಿಸಬೇಕಿದೆ. ವಿದ್ಯಾರ್ಥಿ ದೆಸೆಯಿಂದಲೇ ಭ್ರಷ್ಟಾಚಾರ ನಿರ್ಮೂಲನೆಗೆ ಕಂಕಣಬದ್ಧರಾಗಬೇಕೆಂದು ಕಿವಿಮಾತು ಹೇಳಿದರು.
ದೇಶದಲ್ಲಿನ ಅಸಮಾನತೆ ಹಾಗೂ ಬಡತನಕ್ಕೆ ನಾವುಗಳೇ ಕಾರಣರಾಗಿದ್ದು ನಮಗೆ ಇವುಗಳು ಬಿಡಿಸಲಾಗದ ಒಗಟಾಗಿ ಪರಿಣಮಿಸಿವೆ. ಉಳ್ಳವರು ಮತ್ತಷ್ಟು ಸ್ಥಿತಿವಂತರಾಗುವ ಮೂಲಕ ಬಡವರನ್ನು, ನಿರ್ಗತಿಕರನ್ನು ಮತ್ತಷ್ಟು ಪಾತಾಳಕ್ಕೆ ತಳ್ಳುವಂತಹ ಸ್ಥಿತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದಾಗಿ ಬಡವರು ಮತ್ತು ಧನಿಕರ ನಡುವೆ ಅಸಮಾನತೆಯ ಅಂತರ ಮತ್ತಷ್ಟು ಹೆಚ್ಚುತ್ತಿದೆ. ಇದು ನಿವಾರಣೆಯಾಗದ ಹೊರತು ಅಭಿವಣದ್ಧಿ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಯುವಜನತೆ ಆಲೋಚಿಸಬೇಕಿದೆ ಎಂದರು. ಬೆಂಗಳೂರಿನ ಗಾಂಧೀ ಪ್ರತಿಷ್ಠಾನದ ಸುಶೀಲಮ್ಮ, ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಡಾ.ಕೆ.ಅನಂತರಾಮ್ ಇತರರು ಉಪನ್ಯಾಸ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.