'ಧನಂಜಯ ದಿನಗೂಲಿ ನೌಕರ'
ಕ.ಪ್ರ. ವಾರ್ತೆ ಟಿ ಹಾಸನ ಟಿ ಮಾ.4 ಕೆಜೆಪಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯಕುಮಾರ್ ಕೆಜೆಪಿಯಲ್ಲಿ ದಿನಗೂಲಿ ನೌಕರನಾಗಿ ಸೇವೆ ಸಲ್ಲಿಸುತ್ತಿದ್ದು ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಹೊಗಳು ಭಟ್ಟನಾಗಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಗೋ. ಮಧುಸೂದನ್ ಲೇವಡಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಪಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸದಾನಂದಗೌಡರ ವಿರುದ್ಧ ದಿನಿತ್ಯ ಆರೋಪ ಮಾಡುವುದು ಅವರ ದಿನನಿತ್ಯ ಕೆಲಸವಾಗಿದೆ. ಈಗಾಗಲೇ ಕೆಜೆಪಿಯಲ್ಲಿ ಸಿದ್ದಲಿಂಗಸ್ವಾಮಿ, ಶೋಭ ಕರಂದ್ಲಾಜೆ ಹಿಡಿತಕ್ಕೆ ಒಳಗಾಗಿದ್ದು ಇದರಿಂದ ಧೃತಿಗೆಟ್ಟಿರುವ ಧನಂಜಯ ಕುಮಾರ್ ಯಡಿಯೂರಪ್ಪನವರ ಮನವನ್ನು ಸಂತಸ ಪಡಿಸಲು ಹುರುಳಿಲ್ಲದ ಆರೋಪಗಳ ಸುರಿಮಳೆಯನ್ನು ಸುರಿಸಿ ಕೃಪಾಕಟಾಕ್ಷಕ್ಕಾಗಿ ಹಾತೊರೆಯುತ್ತಿದ್ದಾರೆ. ಈಗೇನಿದ್ದರೂ ಕೆಜೆಪಿ ಶೋಭಕ್ಕ, ಸ್ವಾಮಿ ಹಾಗೂ ಯಡಿಯೂರಪ್ಪನವರ ಪಕ್ಷವಾಗಿದ್ದು ಅದಕ್ಕೆ ಕೆಎಸ್ಎಸ್ ಎಂದು ಹೆಸರಿಟ್ಟರೆ ಒಳ್ಳೆಯದು ಎಂದು ಸಲಹೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

