ಹಾಸನ

ರೇವಣ್ಣ ರೋಡ್ ಶೋ

Published On :

ಹಾಸನ: ನಗರಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನಗರದ ವಾರ್ಡ್‌ಗಳಲ್ಲಿ ಜೆಡಿಎಲ್ಪಿ ನಾಯಕ ಎಚ್.ಡಿ. ರೇವಣ್ಣ ಸೋಮವಾರ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿದರು.
ನಗರದ ಎಲ್ಲಾ ವಾರ್ಡ್‌ಗಳಲ್ಲಿ ಪಕ್ಷದ ಅಭ್ಯರ್ಥಿಯ ಪರ ಮತ ನೀಡಿ ಜಯಗಳಿಸುವಂತೆ ಮನವಿ ಮಾಡಿದ ಅವರು ತಮ್ಮ ಅಧಿಕಾರವಾಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಲ್ಲಿ ಮನವರಿಕೆ ಮಾಡಿಕೊಟ್ಟರು.
ಈ ಸಂದರ್ಭದಲ್ಲಿ ಶಾಸಕ ಎಚ್.ಎಸ್.ಪ್ರಕಾಶ್, ವಿಧಾನಪರಿಷತ್ ಸದಸ್ಯ ಪಟೇಲ್ ಶಿವರಾಂ, ಮಾಜಿ ಶಾಸಕ ಬಿ.ವಿ.ಕರೀಗೌಡ, ಮುಖಂಡರಾದ ಕೆ.ಎಂ.ರಾಜೇಗೌಡ, ಚನ್ನವೀರಪ್ಪ, ತಾ ಅಧ್ಯಕ್ಷ ಎಸ್.ದೇವೇಗೌಡ, ರಾಜ್ಯ ಯುವ ಜೆಡಿಎಸ್ ಕಾರ್ಯದರ್ಶಿ ಹೊಂಗೆರೆ ರಘು, ಮಾಜಿ ನಗರಸಭಾ ಅಧ್ಯಕ್ಷ ಸಿ.ಆರ್.ಶಂಕರ್, ಅಭ್ಯರ್ಥಿಗಳು, ಕಾರ್ಯಕರ್ತರು ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.