ಹಾಸನ

ಮಲ್ಲೇಶ್ವರ ದೇಗುಲದಲ್ಲಿ ರುದ್ರಾಭಿಷೇಕ

Published On :

ಕ.ಪ್ರ.ವಾರ್ತೆ  ಹಾಸನ  ಮಾ.9
 ನಗರದ ಸುಭಾಷ್ ಚೌಕದಲ್ಲಿನ ಶ್ರೀ ಮಲ್ಲೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಮಾ.10 ರಂದು ಬೆಳಗ್ಗೆ 6 ರಿಂದ ಸೋಮವಾರ ಮಧ್ಯಾಹ್ನ 12-30 ರವರೆಗೆ ಸ್ವಾಮಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ, ರುದ್ರಾಭಿಷೇಕ, ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಮತ್ತಿತರ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಅರ್ಚಕ ಪ್ರಸನ್ನ ಕೋರಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಣೆ
ಕ.ಪ್ರ.ವಾರ್ತೆ ್ಣ ಜಾವಗಲ್ಣ್ ಮಾ.9
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು. ಕಾಲೇಜಿನ ಮಹಿಳಾ ದೌರ್ಜನ್ಯ ತಡೆ ಸಮಿತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಪನ್ಯಾಸಕಿ ಪ್ರಿಯಾಂಕ ಮಹಿಳೆಯರು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸಬಲೀಕರಣಗೊಳ್ಳುವುದು ಅನಿವಾರ್ಯವಾಗಿದೆ ಎಂದರು. ವಿದ್ಯಾರ್ಥಿನಿ ತನುಜಾ, ವಿನುತಾ, ಅರ್ಪಿತಾ, ಸೌಮ್ಯ ಮಾತನಾಡಿದರು. ಉಪನ್ಯಾಸಕ ಶಿವಶಂಕರ್ ಸತೀಶ್ ದಿಲೀಪ್, ಪ್ರದೀಪ್ ಶ್ರೀನಿವಾಸ ನಾಯಕ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.