ಹಾಸನ

ಚೇತರಿಕೆ ಹಾದಿಯಲ್ಲಿ ಕಾಂಗ್ರೆಸ್ ಪಕ್ಷ...

Published On :

ಸಕಲೇಶಪುರ: ಪುರಸಭೆ ಚುನಾವಣೆಯಲ್ಲಿ ಗಣನೀಯ ಪ್ರಗತಿ ಸಾಧಿಸಿರುವ ಕಾಂಗ್ರೆಸ್ ಇದೀಗ ಚೇತರಿಕೆಯ ಹಾದಿಯಲಿದೆ ಎಂದು ತಾಲೂಕು ಕಾಂಗ್ರೆಸ್ ಅಧ್ಯಕ್ಷ ತೋಟದಗದ್ದೆ ವಿದ್ಯಾಶಂಕರ್ ಹೇಳಿದರು. ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಪುರಸಭೆ ಚುನಾವಣೆಯ 23 ವಾರ್ಡ್‌ಗಳಲ್ಲಿ 6 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವುಗಳಿಸಿದ್ದು ಇನ್ನೂ 4 ವಾರ್ಡ್‌ಗಳಲ್ಲಿ ಒಂದಂಕಿ ಮತಗಳಿಂದ ನಮ್ಮ ಅಭ್ಯರ್ಥಿ ಸೋತಿದ್ದರೆ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಎರಡನೇ ಸ್ಥಾನಗಳಿಸಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಶೇಕಡಾವಾರು ಮತಗಳ ಸಂಖ್ಯೆ ಹೆಚ್ಚಿದೆ. ಅಲ್ಲದೆ ಕಳೆದ ತಿಂಗಳು ನಡೆದ ವಣಗೂರು ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಇಬ್ಬರು ಆಯ್ಕೆಯಾಗುವ ಮೂಲಕ ಚೇತರಿಕೆಯ ಮುನ್ಸೂಚನೆ ನೀಡಿದ್ದು ಗ್ರಾಮೀಣ ಮಟ್ಟದಲ್ಲೂ ಪ್ರಗತಿ ಸಾಧಿಸಿದ್ದೇವೆ. ಇದು ಮುಂಬರುವ ವಿಧಾನಸಭಾ ಚುನಾವಣೆಗೆ ಶುಭ ಸೂಚಕವಾಗಿದೆ ಎಂದರು. ಪುರಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಕಾರಣವಾದ ಎಲ್ಲಾ ಮುಖಂಡರು, ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯದರ್ಶಿ ಗೊದ್ದುಲೋಕೇಶ್, ಯುವ ಘಟಕದ ಅಧ್ಯಕ್ಷ ಕೌಡಳ್ಳಿ ಲೋಹಿತ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.