ಹಾಸನ

ತಾಲೂಕುವಾರು ಮರಳು ದರ ನಿಗದಿ

Published On :

ಕ.ಪ್ರ.ವಾರ್ತೆ ೤ ಹಾಸನ೤ ಮಾ. 16
ಜಿಲ್ಲಾದ್ಯಂತ ನಡೆಯುತ್ತಿರುವ ಅಕ್ರಮ ಮರಳು ಸಾಗಾಣಿಕೆ ತಡೆಯಲು ಜಿಲ್ಲಾಡಳಿತ ಮುಂದಾಗಿದೆ.
ಈ ನಿಟ್ಟಿನಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೂತನ ಮರಳು ನೀತಿ ಜಾರಿ ಕುರಿತಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ಕೆ.ಪಿ. ಮೋಹನರಾಜ್ ಅವರು, ಅಕ್ರಮ ತಡೆಗೆ ಕಠಿಣ ಕ್ರಮಗಳನ್ನು ಅನುಸರಿಸುತ್ತಿದೆಯಾದರೂ ಇನ್ನೂ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಅಧಿಕಾರಿಗಳು ಜಾಗೃತರಾಗಿ ಕಾರ್ಯೋನ್ಮುಖರಾಗಬೇಕು ಎಂದು ತಾಕೀತು ಮಾಡಿದರು.
ಜಿಲ್ಲೆಯಲ್ಲಿ ಮರಳು ಸಾಗಾಣಿಕೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸುತ್ತಿದೆ. ಒಂದು ವೇಳೆ ಇನ್ನೂ ಅಕ್ರಮಕ್ಕೆ ಯತ್ನಿಸಿದರೆ ದುಬಾರಿ ದಂಡ ತೆರಬೇಕಾಗುತ್ತದೆ. ಅಕ್ರಮ ಮರಳು ಸಾಗಾಣಿಕೆ ನಡೆಸುವ ಲಾರಿಗಳಿಗೆ ಪ್ರಥಮ ಪ್ರಕರಣದಲ್ಲಿ 20 ಸಾವಿರ ರು. ಮತ್ತು ಟ್ರ್ಯಾಕ್ಟರ್‌ಗಳಿಗೆ ತಲಾ 10 ಸಾವಿರ ರು ದಂಡ ವಿಧಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ ರು.
ನಿಗದಿತ ದರಕ್ಕಿಂತ ಹೆಚ್ಚಿಗೆ ಹಣ ಪಡೆದು ಮರಳು ಪೂರೈಸುತ್ತಿರುವ ಬಗ್ಗೆ  ವಿಧಾನ ಪರಿಷತ್ ಸದಸ್ಯ  ಪಟೇಲ್ ಶಿವರಾಂ ಆಕ್ಷೇಪ ವ್ಯಕ್ತಪಡಿಸಿದರು. ಪ್ರತಿ ಕಿ.ಮೀ.ಗೆ ಸೂಕ್ತ ದರವನ್ನು  ನಿಗದಿಪಡಿಸಬೇಕು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಈಗಾಗಲೇ ತಾಲೂಕುವಾರು ದರ ನಿಗದಿಪಡಿಸಲಾಗಿದೆ. ಅದಕ್ಕೂ ಹೆಚ್ಚಿನ ದರ ಪಡೆಯುವವರ ಅಥವಾ ಕಡಿಮೆ ಪ್ರಮಾಣದ ಮರಳು ಸರಬರಾಜು ಮಾಡುವವರ ವಿರುದ್ಧ ಕ್ರಮ ವಹಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಅಕ್ರಮ ಮರಳು ಸಾಗಾಣಿಕೆ ತಡೆ ಬಗ್ಗೆ ತಾವು ಅತಿ ಹೆಚ್ಚು ಮುತುವರ್ಜಿ ವಹಿಸಿದ್ದು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಇಲ್ಲದಿದ್ದರೆ ಕರ್ತವ್ಯ ಲೋಪವೆಸಗಿರುವವರ ವಿರುದ್ಧ ಕ್ರಮ ವಹಿಸಬೇಕಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ಶಾಸಕ ಎಚ್.ಎಸ್. ಪ್ರಕಾಶ್, ರಾಜ್ಯಸಭೆ ಮಾಜಿ ಅಧ್ಯಕ್ಷ ಎಚ್.ಕೆ. ಜವರೇಗೌಡ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹನುಮಂತರೆಡ್ಡಿ, ಪ್ರಾದೇಶಿಕ ಸಾರಿಗೆ ಅಧಿಕಾರಿ, ನಾನಾ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.


ಎಲ್ಲೆಲ್ಲಿ ಎಷ್ಟು ಬೆಲೆ


ಈ ಬಗ್ಗೆ ವಿವರಣೆ ನೀಡಿದ ಲೋಕೋಪಯೋಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಆಲೂರು ತಾಲೂಕಿಗೆ ಪ್ರತಿ 10 ಟನ್ ತೂಕದ ಮರಳಿನ ಲಾರಿಗೆ 5,500 ರು. ಅರಸೀಕೆರೆ ತಾಲೂಕಿಗೆ 8,600 ರು, ಅರಕಲಗೂಡು ತಾಲೂಕಿಗೆ 6,300 ರು ಬೇಲೂರು ತಾಲೂಕಿಗೆ 6,300 ರು, ಚನ್ನರಾಯಪಟ್ಟಣ ತಾಲೂಕಿಗೆ 7,900 ರು, ಹೊಳೆನರಸೀಪುರ ತಾಲೂಕಿಗೆ 7550 ರು, ಹಾಸನ ತಾಲೂಕಿಗೆ 6300 ರು, ಸಕಲೇಶಪುರ ತಾಲೂಕಿಗೆ 3,900 ರು. ದರ ನಿಗದಿಪಡಿಸಲಾಗಿದೆ. ಇದರಂತೆ ಮರಳನ್ನು ಸಾರ್ವಜನಿಕರಿಗೆ ಸರಬರಾಜು ಮಾಡಬೇಕಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.