ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ
ಚನ್ನರಾಯಪಟ್ಟಣ: ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿ ಆಕೆಯ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಗುರುವಾರ ಶಾಲೆ ಮುಗಿಸಿಕೊಂಡು ಪಟ್ಟಣದ ಗಣೇಶನಗರದಲ್ಲಿರುವ ಹಾಸ್ಟೆಲ್ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ಇಬ್ಬರು ಯುವಕರು ಆಕೆಯನ್ನು ಅಪಹರಿಸಿ ಹೊಳೆನರಸೀಪುರ ಬಳಿಗೆ ಕರೆದೊಯ್ದು ಆಕೆಯ ಮೈಮೇಲೆ ಸಿಗರೇಟಿನಿಂದ ಸುಟ್ಟಿರುವುದಲ್ಲದೆ, ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾರೆ ಎಂದು ಪಟ್ಟಣ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದಾರೆ. ಕಾರು ಹೊಳೆನರಸೀಪುರ ಬಳಿ ಹೋಗುತ್ತಿದ್ದಂತೆ ಬಾಲಕಿ ಮೇಲೆ ಅತ್ಯಾಚಾರಕ್ಕೆ ಮುಂದಾಗಿ ಆಕೆಯ ಬಟ್ಟೆಯನ್ನು ಹರಿದು ಹಾಕಿದ ಸಂದರ್ಭದಲ್ಲಿ ಆಕೆ ಇಬ್ಬರಿಗೂ ಹಲ್ಲಿನಿಂದ ಕಚ್ಚಿ ಅಲ್ಲಿಂದ ಪರಾರಿಯಾಗಿ ಹೊಳೆನರಸೀಪುರ ಬಸ್ಸ್ಟ್ಯಾಂಡ್ಗೆ ತೆರಳಿದಳು. ಇದೇ ವೇಳೆ ಅಲ್ಲಿದ್ದ ಸಾರ್ವಜನಿಕರು ಅವಳನ್ನು ಹಾಸ್ಟೆಲ್ಗೆ ಕರೆದೊಯ್ದು ಆಸರೆ ನೀಡಿದ್ದಾರೆ. ಪಟ್ಟಣ ಪೋಲಿಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

