ಹಾಸನ

ಇಂದು-ನಾಳೆ ಮಿನಿ ಕ್ರಿಕೆಟ್

Published On :

ಚನ್ನರಾಯಪಟ್ಟಣ: ಮಾರುತಿ ಕ್ರಿಕೆಟರ್ಸ್‌ನಿಂದ ಹೊನಲು ಬೆಳಕಿನ ಮಿನಿ ಕ್ರಿಕೆಟ್ ಪಂದ್ಯಾವಳಿಯನ್ನು ಮಾ.30ರಿಂದ 31ರ ವರೆಗೆ ಗೂರಮಾರನಹಳ್ಳಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಂಜೆ 6 ಗಂಟೆಗೆ ಏರ್ಪ ಡಿಸಲಾಗಿದ್ದು ಪ್ರಥಮ ಬಹುಮಾನ 15 ಸಾವಿರ, ದ್ವಿತೀಯ ಬಹುಮಾನ 10 ಸಾವಿರ ಹಾಗೂ ತೃತೀಯ ಬಹುಮಾನ 5 ಸಾವಿರ ರು. ನಗದು ಹಾಗೂ ಟ್ರೋಫಿ ನೀಡಲಾಗುವುದು.
ಪೊಲೀಸ್ ಧ್ವಜ ದಿನಾಚರಣೆ
ಹಾಸನ: ಏಪ್ರಿಲ್ 2 ರಂದು ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯನ್ನು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಅರಸೀಕೆರೆ ನಿವೃತ್ತ ಆರಕ್ಷಕ ಉಪನಿರೀಕ್ಷಕ ದಾಸೇಗೌಡ ಭಾಗವಹಿಸುವರು. ಜಿಲ್ಲಾ ಆರಕ್ಷಕ ಅಧೀಕ್ಷಕ ಅಮಿತ್‌ಸಿಂಗ್ ಅಧ್ಯಕ್ಷತೆ ವಹಿಸುವರು.
ಉಪ್ಪಾರ ಸಂಘದ ಅಧ್ಯಕ್ಷ ಮುಂದುವರಿಕೆ
ಹಾಸನ: ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣೆ ಮುಗಿಯುವವರೆಗೆ ಅರಕಲಗೂಡು ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ವೆಂಕಟೇಶ್ ಹಾಗೂ ಕಾರ್ಯಕಾರಿ ಮಂಡಳಿಯನ್ನೇ ಮುಂದಿನ ಸಭೆಯವರೆಗೆ ಮುಂದುವರಿಸಲು ಜಿಲ್ಲಾ ಸಂಘ ತೀರ್ಮಾನಿಸಿದೆ ಎಂದು ಜಿಲ್ಲಾಧ್ಯಕ್ಷ ಎಸ್.ಜೆ.ನೀಲಪ್ಪ ತಿಳಿಸಿದ್ದಾರೆ.
ಅನಿರ್ದಿಷ್ಟಾವಧಿ ಮುಷ್ಕರ ಏ.1ರಿಂದ
ಹಾಸನ: ನಾನಾ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಫೆಡರೇಷನ್ ಆಫ್ ಕರ್ನಾಟಕ ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟ್ಸ್ ಅಖಿಲ ಭಾರತ ಸಾಗಣೆದಾರರ ಏ.1ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಕೇಂದ್ರ ಸರ್ಕಾರ ಥರ್ಡ್ ಪಾರ್ಟಿ ಪ್ರೀಮಿಯಂ ದರವನ್ನು ಏ.1ರಿಂದ ಜಾರಿಗೆ ಬರುವಂತೆ ಏಕಾಏಕಿ ಶೇ.107ರಷ್ಟು ಏರಿಸಿರುವುದು ಎಲ್ಲಾ ಕೋನಗಳಿಂದ ಸಾಗಣೆ ಉದ್ಯಮವನ್ನು ಸತತವಾಗಿ ಕಡೆಗಣಿಸುತ್ತಿರುವುದು ಖಂಡನೀಯ ಎಂದಿದ್ದಾರೆ.
ನಿರಂಜನ್ ಜಿಲ್ಲಾ ಕಾಂಗ್ರೆಸ್ ಪ್ರ.ಕಾರ್ಯದರ್ಶಿ
ಅರಸೀಕೆರೆ: ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಬಿ.ಜಿ.ನಿರಂಜನ್ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಹಾಗೂ ಮಾಜಿ ಸಚಿವ  ಬಿ.ಶಿವರಾಂ ತಿಳಿಸಿದ್ದಾರೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷರಾಗಿ ರಾಜ್ಯ ಜೆಡಿಎಸ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಿ.ಜಿ.ನಿರಂಜನ್ ಶಾಸಕರ ಒಡೆದು ಆಳುವ ನೀತಿ ವಿರೋಧಿಸಿ ಇತ್ತೀಚಿನ ಪುರಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು.     

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.