ಪುಟ್ಟೇಗೌಡರಿಗೆ ಟಿಕೆಟ್ ನೀಡಿದರೆ ಸಾಮೂಹಿಕ ರಾಜಿನಾಮೆ
ಕ.ಪ್ರ.ವಾರ್ತೆ ಹಾಸನ ಮಾ 29
ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಿಂದ ಸಿ.ಎಸ್.ಪುಟ್ಟೇಗೌಡರಿಗೆ ಟಿಕೆಟ್ ನೀಡಿದರೆ ಮೂಲ ಕಾಂಗ್ರೆಸ್ಸಿಗರೆಲ್ಲರೂ ಕೆಪಿಸಿಸಿ ಕಚೇರಿಗೆ ತೆರಳಿ ಸಾಮೂಹಿಕವಾಗಿ ರಾಜಿನಾಮೆ ನೀಡುವುದಾಗಿ ಜಿಪಂ, ತಾಪಂ ಹಾಗೂ ಕಾಂಗ್ರೆಸ್ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಪಂ ಸದಸ್ಯ ಎಂ.ಎ. ರಂಗಸ್ವಾಮಿ, ತಾಪಂ ಸದಸ್ಯರಾದ ವಸಂತಮ್ಮ, ಚೈತ್ರಾ ವಿಜಯಕುಮಾರ್, ಪ್ರಭಾಕರ್, ನಗರ ಘಟಕ ಅಧ್ಯಕ್ಷ ಮಹೇಶ್, ಜಿಲ್ಲಾ ಯುವ ಕಾಂಗ್ರೆಸ ಪ್ರಧಾನ ಕಾರ್ಯದರ್ಶಿ ಎನ್.ಡಿ.ಗೌತಮ್, ಪರಮೇಶ್, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಎ.ಎನ್.ಮೋಹನ್‌ಕುಮಾರ್ ಅವರು ಪಕ್ಷಾಂತರಿ ಪುಟ್ಟೇಗೌಡರಿಗೆ ಟಿಕೆಟ್ ನೀಡುವುದು ಅನೈತಿಕ ರಾಜಕಾರಣವಾಗುತ್ತದೆ ಎಂದು ಖಂಡಿಸಿದರು.
ಪಕ್ಷಾಂತರಿ ಪುಟ್ಟೇಗೌಡರಿಗೆ ಶ್ರವಣಬೆಳಗೊಳ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಿದಲ್ಲಿ ಕಾರ್ಯಕರ್ತರಿಂದ ಏಪ್ರಿಲ್ 1 ರಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿ ಜಿಪಂ, ತಾಪಂ, ಗ್ರಾಪಂ ಸದಸ್ಯರು, ಹಿಂದುಳಿದ ವರ್ಗ ಘಟಕ, ಮಹಿಳಾ ಕಾಂಗ್ರೆಸ್ ಸಮಿತಿ, ಯುವ ಕಾಂಗ್ರೆಸ್ ಸಮಿತಿ, ನಗರ ಘಟಕಕ್ಕೆ ಸಾಮೂಹಿಕ ರಾಜೀನಾಮೆ ನೀಡಲಾಗುವುದು ಎಂದು ಹೇಳಿದರು. ಪುಟ್ಟಸ್ವಾಮಿ ಕಾಂಗ್ರೆಸ್ ಸೇರ್ಪಡೆಯಾದ ತಕ್ಷಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದು ಸರಿಯಲ್ಲ. ಈ ರೀತಿ ಮಾಡಿದರೆ ಪಕ್ಷ ಮೂಲ ಕಾಂಗ್ರೆಸ್ಸಿಗರಿಗೆ ಅನ್ಯಾಯ ಎಸಗಿದಂತಾಗುತ್ತದೆ. ಹಾಗೂ ಪಕ್ಷದ ಗೌರವ, ವರ್ಚಸ್ಸು ಕುಂದಲಿದೆ ಎಂದು ನುಡಿದರು.
ಶ್ರವಣಬೆಳಗೊಳ ಕ್ಷೇತ್ರದಿಂದ ಪಕ್ಷ ಸಂಘಟಿಸಿದಂತವರಿಗೆ ಟಿಕೆಟ್ ನೀಡಬೇಕು. ಅದನ್ನು ಬಿಟ್ಟು ಪಕ್ಷಾಂತರರಿಗೆ ಯಾವುದೇ ಕಾರಣಕ್ಕೂ ನೀಡಬಾರದು.
ಚನ್ನರಾಯಪಟ್ಟಣ ತಾಲೂಕಿನಲ್ಲಿ ಪಕ್ಷಕ್ಕೆ ನಿಷ್ಠೆಯಿಂದ ದುಡಿದ ಅನೇಕ ಕಾರ್ಯಕರ್ತರಿದ್ದಾರೆ. ಅವರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಮುಖಂಡರು ಒತ್ತಾಯಿಸಿದರು. ಪಕ್ಷಕ್ಕೆ ಪುಟ್ಟೇಗೌಡರು ಸೇರಿರುವುದು ಮೂಲ ಕಾಂಗ್ರೆಸಿಗರಿಗೆ ಯಾವುದೇ ರೀತಿಯಿಂದ ಬೇಸರವಿಲ್ಲ. ಆದರೆ ಅವರಿಗೆ ಟಿಕೆಟ್ ನೀಡುವ ವಿಚಾರ ಸರಿಯಲ್ಲ. ಇದರಿಂದ ಕ್ಷೇತ್ರದ ಕಾರ್ಯಕರ್ತರಿಗೆ ನಿರಾಸೆಯಾಗಿದೆ ಎಂದು ಅಭಿಪ್ರಾಯ ಪಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

