ಕಾಟೀಕೆರೆ ಪ್ರಸನ್ನಕುಮಾರ್ ನೇತೃತ್ವದಲ್ಲಿ ಕೆಜೆಪಿ ಸೇರ್ಪಡೆ
ಕ.ಪ್ರ. ವಾರ್ತೆ ಅರಸೀಕೆರೆ ಮಾ. 30
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಆಡಳಿತ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಮತ್ತು ಜನಪರ ಯೋಜನೆಗಳನ್ನು ಮೆಚ್ಚಿ ಕಾಟೀಕೆರೆ ಪ್ರಸನ್ನಕುಮಾರ್ ನೇತೃತ್ವದಲ್ಲಿ ಬಿಜೆಪಿ ತೊರೆದು ಕೆಜೆಪಿ ಸೇರ್ಪಡೆಯಾಗುತ್ತಿರುವುದಾಗಿ ಬಿಜೆಪಿ ಮಾಜಿ ನಗರಾಧ್ಯಕ್ಷ ವೈ.ಕೆ.ದೇವರಾಜ್, ಮಾಜಿ ಪ್ರಧಾನ ಕಾರ್ಯದರ್ಶಿ ಮನೋಜಕುಮಾರ್ ಹಾಗೂ ಬಿ.ಎಸ್.ಲೋಕೇಶ್ ತಿಳಿಸಿದ್ದಾರೆ.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸನ್ನ ಕುಮಾರ್ ಅವರೊಂದಿಗೆ ಕಳೆದ 15 ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು ಅವರು 2 ಬಾರಿ ಯುವ ಮೋರ್ಚಾ ಅಧ್ಯಕ್ಷರಾಗಿ, 2 ಅವಧಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ತಾಲೂಕು ಅಧ್ಯಕ್ಷರಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದು ಅವರ ಅಧ್ಯಕ್ಷತೆಯಲ್ಲಿ 150 ಗ್ರಾಪಂ ಸದಸ್ಯರು, 1 ಜಿಪಂ, 4 ತಾಪಂ. 2 ಎಪಿಎಂಸಿ ಸದಸ್ಯರು ಆಯ್ಕೆಯಾಗಿದ್ದಾರೆ ಎಂದು ವಿವರಿಸಿದರು. ಕೆಲವರು ಪ್ರಸನ್ನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಇವೆಲ್ಲವೂ ಸತ್ಯಕ್ಕೆ ದೂರವಾದ ಸಂಗತಿ ಎಂದು ತಿಳಿಸಿದರು.
ರಾಜೇಶ್ ಬೈಲನಹಳ್ಳಿ, ವಕೀಲ ಹಾಗೂ ಗ್ರಾಪಂ ಸದಸ್ಯ ಕುಡುಕುಂದಿ ಅಶೋಕ್, ಬಿ.ಎನ್.ಲೋಕೇಶ್, ಸದಾಶಿವ ಚಿಕ್ಕೂರು, ಟಿ.ಎನ್.ಪರಮೇಶ್, ರಾಜೇಶ್, ರವಿ ನರಸೀಪುರ, ಬಿ.ಆರ್.ಷಡಾಕ್ಷರಿ, ರವೀಶ್, ಬಿ.ಎಂ.ಬಸವರಾಜ್, ಪ್ರಕಾಶ್, ಪ್ರಭಣ್ಣ, ಪ್ರವೀಣ, ಹಿತೇಶ್, ದಯಾನಂದ್, ಶಶಿಧರ, ಅಮೃತೇಶ್ ಇನ್ನಿತರರು ಬಿಜೆಪಿ ತ್ಯಜಿಸಿ ಕೆಜೆಪಿ ಸೇರ್ಪಡೆಯಾಗಿರುವುದಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

