ಹಾಸನ

ಪರಭಾಷೆ ನಟರಿಂದ ಮತಯಾಚಿಸಿದರೆ ಕಲ್ಲು

Published On :

ಹಾಸನ: ವಿಧಾನಸಭೆ ಚುನಾವಣೆಯಲ್ಲಿ ಮತದಾರರ ಗಮನ ಸೆಳೆಯಲು ಪರಭಾಷೆ ನಟರನ್ನು ಕನ್ನಡ ನಾಡಿಗೆ ಕರೆತಂದು ಬೇರೆ ಭಾಷೆಯಲ್ಲಿ ಭಾಷಣ ಮಾಡಿಸಿ ಮತಯಾಚಿಸಿದರೆ ಕರವೇ ಕಾರ್ಯಕರ್ತರಿಂದ ಅಂತಹ ವೇದಿಕೆ ಮೇಲೆ ಕಲ್ಲು ಬೀಳಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎನ್.ನಾರಾಯಣಗೌಡ ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ.5 ರಂದು ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಗಮನ ಸೆಳೆಯಲು ಪರಭಾಷೆ ನಟರನ್ನು ಕನ್ನಡನಾಡಿಗೆ ಕರೆಸಿ ಭಾಷಣ ಅವರ ತಾಯಿಭಾಷೆಯಲ್ಲಿ ಮಾತನಾಡುವುದು ಕಂಡು ಬಂದರೆ ಕರವೇ ಕಾರ್ಯಕರ್ತರು ವೇದಿಕೆ ಮೇಲೆ ಕಲ್ಲು ತೂರಲಿದ್ದಾರೆ. ಪರಭಾಷಾ ನಟರನ್ನು ಕರೆಸುವ ಮೂಲಕ  ರಾಷ್ಟ್ರೀಯ ಪಕ್ಷಗಳು ಕನ್ನಡಕ್ಕೆ ಅವಮಾನ ಮಾಡುತ್ತಿವೆ ಎಂದು ಆರೋಪಿಸಿದರು. ಕರವೇ ಜಿಲ್ಲಾಧ್ಯಕ್ಷ ರವೀಂದ್ರಕುಮಾರ್ ಇತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.